ಕೂಡಿಗೆ, ಸೆ.19: ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವು ತಾ. 20ರಂದು (ಇಂದು) ಕೂಡಿಗೆ ಕ್ರೀಡಾ ಶಾಲೆ, ಡಯಟ್ ಮೈದಾನದಲ್ಲಿ ನಡೆಯಲಿವೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ.ಹರೀಶ್, ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಟಿ, ಕಿರಣ್ ಕಾರ್ಯಪ್ಪ ಸೇರಿದಂತೆ ಮೂರು ತಾಲೂಕಿನ ಜನಪ್ರತಿನಿಧಿಗಳು ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.