ಮಡಿಕೇರಿ, ಸೆ.19 : ಭಾರತ ಸರ್ಕಾರ ಬುಡಕಟ್ಟು ಮಂತ್ರಾಲಯ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿ ಇತ್ತೀಚೆಗೆ ಅಂತರ್ ಏಕಲವ್ಯ ಮಾದರಿ ವಸತಿ ಶಾಲೆಗಳ ರಾಜ್ಯ ಮಟ್ಟದ ಸಾಂಸ್ಕøತಿಕ ಕಾರ್ಯಕ್ರಮವು ಬೆಂಗಳೂರಿನ ಬೊಮ್ಮಮಾರು (ದೇವನಹಳ್ಳಿ) ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ವೀರಾಜಪೇಟೆ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಜಾನಪದ ನೃತ್ಯ ಸ್ಪರ್ಧೆಯಲ್ಲಿ ಜಿಲ್ಲೆಯ ಸಂಸ್ಕøತಿಯನ್ನು ಬಿಂಬಿಸುವ ಉಮ್ಮತ್ತಾಟ್ ನೃತ್ಯ ಪ್ರದರ್ಶಿಸಿ ದ್ವಿತೀಯ ಬಹುಮಾನ ಮತ್ತು ರೂ. 35 ಸಾವಿರ ನಗದನ್ನು ಹಾಗೂ 9ನೇ ತರಗತಿ ವಿದ್ಯಾರ್ಥಿನಿ ರೇವತಿ ಪ್ರಭು ಭರತನಾಟ್ಯ ಪ್ರದರ್ಶಿಸಿ ದ್ವಿತೀಯ ಬಹುಮಾನ ಮತ್ತು ರೂ. 13 ಸಾವಿರ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ಪ್ರಯುಕ್ತ ಪ್ರಶಸ್ತಿ ಪಡೆಯಲು ಪ್ರಯತ್ನಿಸಿದ ಶಾಲೆಯ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿ ಯರಿಗೆ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಹಾಗೂ ಪ್ರಾಂಶುಪಾಲ ಎಸ್.ಎಚ್.ಯೋಗ ನರಸಿಂಹಸ್ವಾಮಿ ಅವರಿಗೆ ಐಟಿಡಿಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್ ಅವರು ಅಭಿನಂದಿಸಿದ್ದಾರೆ.