ಗೋಣಿಕೊಪ್ಪ ವರದಿ, ಸೆ. 19: ಪಾಲಿಬೆಟ್ಟ ಲಯನ್ಸ್ ಕ್ಲಬ್ ಮತ್ತು ವೀರಾಜಪೇಟೆ ದಂತ ವೈದ್ಯಕೀಯ ಮಹಾವಿದ್ಯಾಲಯ ಆಶ್ರಯದಲ್ಲಿ ತಾ. 23 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ.

ಕನಿಷ್ಟ ಮಟ್ಟದ ದಂತ ಶಸ್ತ್ರಚಿಕಿತ್ಸೆ ನಡೆಯಲಿದೆ. ಆರೋಗ್ಯ ಕಾಪಾಡುವ ದೃಷ್ಟಿಯಲ್ಲಿ ದಂತ ಮತ್ತು ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಪಾಲಿಬೆಟ್ಟ ಲಯನ್ಸ್ ಕ್ಲಬ್ ಪ್ರಕಟಣೆ ತಿಳಿಸಿದೆ.