ಮಡಿಕೇರಿ, ಸೆ.19 : ಪ್ರಸಕ್ತ (2019-20) ಸಾಲಿನ ಗ್ರಾಮೀಣ ಮಟ್ಟದ ಪ್ರೌಢ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ತಂತ್ರಜ್ಞಾನ ರಸಪ್ರಶ್ನೆ ಕಾರ್ಯಕ್ರಮವು ತಾ. 20 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಪ್ರತಿ ಶಾಲಾ ಮಟ್ಟದಲ್ಲಿ ವಿಜೇತರಾದ ಎರಡು ತಂಡಗಳು ಬೆಳಿಗ್ಗೆ 10 ಗಂಟೆಯೊಳಗೆ ಭಾಗವಹಿಸಲು ಪ್ರಾಂಶುಪಾಲರು, ಮುಖ್ಯ ಶಿಕ್ಷಕರು ಸೂಕ್ತ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.