ಮಡಿಕೇರಿ, ಸೆ. 19: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 20 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆಯುಷ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಮಟ್ಟದ ಆಯುಷ್ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಆಯುಷ್ ನಿರ್ದೇಶನಾಲಯದ ಆಯುಕ್ತೆ ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಜಿ.ಪಂ. ಸಿಇಓ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಹೆಚ್. ರಾಮಚಂದ್ರ ಇತರರು ಪಾಲ್ಗೊಳ್ಳಲಿದ್ದಾರೆ.