ಮಡಿಕೇರಿ, ಸೆ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಡಗದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 20 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ಕಡಗದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.

ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ಸಂಸದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾ.ಪಂ.ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಸದಸ್ಯ ಅಪ್ರು ರವೀಂದ್ರ, ಕಡಗದಾಳು ಗ್ರಾ.ಪಂ.ಅಧ್ಯಕ್ಷೆÀ ನಿಷ್ಮಾ, ಉಪಾಧ್ಯಕ್ಷ ಮಾದೇಟಿರ ತಿಮ್ಮಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪೆರಿಗ್ರೀನ್ ಎಸ್. ಮಚ್ಚಾಡೋ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಪುಟ್ಟ ರಂಗನಾಥ, ಕಡಗದಾಳು ಸ.ಹಿ.ಪ್ರಾ.ಶಾಲೆ ಎಸ್‍ಡಿಎಂಸಿ ಅಧ್ಯಕ್ಷ ಎಚ್.ಎಂ.ಲಕ್ಷ್ಮಣ, ಶಿಕ್ಷಕಿ ಗಂಗಮ್ಮ ಇತರರು ಪಾಲ್ಗೊಳ್ಳಲಿದ್ದಾರೆ.