ಸೋಮವಾರಪೇಟೆ, ಸೆ. 19: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ವಲಯದ ಯೋಜನಾ ಕಚೇರಿಯಲ್ಲಿ ನಡೆದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಗ್ರಾಮಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನ ಮಾಡುವಲ್ಲಿ ಒಕ್ಕೂಟದ ಪದಾಧಿಕಾರಿಗಳ ಪಾತ್ರ ಮುಖ್ಯ ಎಂದರು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಮಾಜದ ಕಟ್ಟಕಡೆಗಿನ ವ್ಯಕ್ತಿಗಳಿಗೂ ಯೋಜನೆಯ ಸೌಲಭ್ಯ ದೊರೆಯುವಂತೆ ಮಾಡಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವಂತೆ ತಿಳಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ಯೋಗೀಶ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಯೋಜನಾಧಿಕಾರಿ ಪ್ರಕಾಶ್ ವೈ ಮಾತನಾಡಿ, ಪದಾಧಿಕಾರಿಗಳ ಜವಾಬ್ದಾರಿಯ ಬಗ್ಗೆ ತರಬೇತಿ ನೀಡಿದರು. ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆಯವರು ಉತ್ತಮ ನಾಯಕನಲ್ಲಿರಬೇಕಾದ ಗುಣಲಕ್ಷಣಗಳ ಬಗ್ಗೆ ತರಬೇತಿ ನೀಡಿದರು. ಶಾಂತಳ್ಳಿ ವಲಯ ಮೇಲ್ವಿಚಾರಕ ಸುಬ್ರಮಣ್ಯ ಹಾಗೂ ತಾಲೂಕು ಆಂತರಿಕ ಲೆಕ್ಕಪರಿಶೋಧಕಿ ಭಾವನಾ ರವಿಪ್ರಸಾದ್ ಅವರುಗಳು ಉಪಸ್ಥಿತರಿದ್ದರು.