ಮಡಿಕೇರಿ ಸೆ.19 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವ ಹಿನ್ನೆಲೆ ತಾ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೊನ್ನಂಪೇಟೆ, ವೀರಾಜಪೇಟೆ, ಶ್ರೀಮಂಗಲ, ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳೆÀಲೆ, ಕಾನೂರು, ಬಿರುನಾಣಿ, ಕುಟ್ಟ ವೀರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.