ಮಡಿಕೇರಿ, ಸೆ. 19 : ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರೊಂದಿಗೆ ಸಂವಹನ ಸಭೆಯು ತಾ. 21 ರಂದು ಬೆಳಿಗ್ಗೆ 11 ಗಂಟೆಯಿಂದ 12 ಮಡಿಕೇರಿ, ಗೋಣಿಕೊಪ್ಪಲು, ವೀರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ. ವಿದ್ಯುತ್ ಗ್ರಾಹಕರು ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ತಿಳಿಸಿದ್ದಾರೆ.