ಕೂಡಿಗೆ, ಸೆ. 19: ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತ ಕಚೇರಿಯ ಉದ್ಘಾಟನಾ ಸಮಾರಂಭ ತಾ. 22 ರಂದು ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ. ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ. ನಗದು ವಿಭಾಗ ಉದ್ಘಾಟನೆ ಕೆ.ಡಿ.ಸಿ.ಸಿ. ಬ್ಯಾಂಕ್‍ನ ಅಧ್ಯಕ್ಷ ಕೆ.ಪಿ. ಗಣಪತಿ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ಕೆ. ಹೇಮಂತ್‍ಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಬಿ.ಡಿ. ಮಂಜುನಾಥ್, ಬಿ.ಕೆ. ಚಿಣ್ಣಪ್ಪ, ಎಸ್.ವಿ. ಭರತ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಸಿ. ಪ್ರೇಮಲೀಲಾ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಸಿ. ಲಕ್ಷ್ಮಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಹೆಚ್.ಡಿ. ರವಿಕುಮಾರ್, ವೈದ್ಯಾಧಿಕಾರಿ ಡಾ. ಡಿ.ಸಿ. ರವಿಚಂದ್ರ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಸಿ. ನಂದೀಶ್ ಸೇರಿದಂತೆ ಸಂಘದ ನಿರ್ದೇಶಕರುಗಳು ಭಾಗವಹಿಸಲಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.