ಮಡಿಕೇರಿ, ಸೆ. 20: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ತಾ. 21 ರಂದು (ಇಂದು) ಬೆಳಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆವರೆಗೆ ಗೋಣಿಕೊಪ್ಪಲು ಉಪ ವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ಸೆಸ್ಕ್ ಇಇ ಸೋಮಶೇಖರ್ ತಿಳಿಸಿದ್ದಾರೆ.