*ಗೋಣಿಕೊಪ್ಪಲು, ಸೆ. 20: ಭಾರತೀಯ ಜನತಾ ಪಕ್ಷದ ವೈದ್ಯಕೀಯ ಪ್ರಕೋಷ್ಠ ಮತ್ತು ತಿತಿಮತಿ ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಹುಟ್ಟುಹಬ್ಬ ಅಂಗವಾಗಿ ತಾ. 21ರಂದು (ಇಂದು) ತಿತಿಮತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಕಾರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿತಿಮತಿ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಎನ್.ಎನ್. ಅನೂಪ್ ಕುಮಾರ್ ತಿಳಿಸಿದ್ದಾರೆ.

ಶಾಸಕ ಕೆ.ಜಿ ಬೋಪಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಂದು ಬೆಳಿಗ್ಗೆ 10.30ಕ್ಕೆ ಸ್ಥಳೀಯರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಪಡೆದುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು ಸ್ಥಳೀಯರು ಇದರ ಸದುಪಯೋಗ ಪಡೆದುಕೊಳ್ಳಲು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕರೆನೀಡಿದರು.