ಕೂಡಿಗೆ, ಸೆ. 20: ಪದವಿಪೂರ್ವ ಶಿಕ್ಷಣ ಇಲಾಖೆ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸೋಮವಾರಪೇಟೆ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಗಳು ಪ್ರಾರಂಭವಾಗಿದ್ದು, ಅಥ್ಲೆಟಿಕ್ ಕ್ರೀಡಾಕೂಟಗಳು ಕೂಡಿಗೆಯ ಕ್ರೀಡಾಶಾಲೆಯ ಆವರಣದಲ್ಲಿ ನಡೆದವು.

ಕ್ರೀಡಾಕೂಟಕ್ಕೆ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೆಂಚಪ್ಪ ಚಾಲನೆ ನೀಡಿದರು. ಕ್ರೀಡೆಯು ಕ್ರೀಡಾಪಟು ಗಳಲ್ಲಿನ ಕ್ರೀಡಾಸ್ಫೂರ್ತಿಯನ್ನು ಹೆಚ್ಚಿಸಲು ಕಾರಣವಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೂಡಿಗೆ ಕ್ರೀಡಾ ಶಾಲೆಯ ಪ್ರಾಂಶುಪಾಲೆ ಪಿ.ಕೆ. ಕುಂತಿ ಬೋಪಯ್ಯ ಮಾತನಾಡಿ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಯು ಅತಿಮುಖ್ಯವಾಗಿರುತ್ತದೆ. ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕೀರ್ತಿ ತಂದಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ಶ್ರೀ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ ಅವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಎಂ. ನಾಗೇಶ್, ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಸಿ.ಎಂ. ಮಹಾ ಲಿಂಗಯ್ಯ, ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್‍ವಾಸ್, ಕೂಡಿಗೆ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಶಿರಂಗಾಲ ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಚನ್ನಕೇಶವ, ಕ್ರೀಡಾ ಶಾಲೆಯ ಅಥ್ಲೆಟಿಕ್ ತರಬೇತು ದಾರ ಅಂತೋಣಿ ಡಿಸೋಜ, ಜಗನ್ನಾಥ್, ಮಂಜುನಾಥ್, ವೆಂಕಟೇಶ್ ಹಾಗೂ ವಿವೇಕಾನಂದ ಕಾಲೇಜಿನ ಉಪನ್ಯಾಸಕ ಧೀಮಂತ್ ಇದ್ದರು.