ಸೋಮವಾರಪೇಟೆ,ಸೆ.20: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ ತಾ. 22ರಂದು ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಪೂರ್ವಾಹ್ನ 10 ಗಂಟೆಗೆ ಆರಂಭವಾಗಲಿರುವ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ಡಿ. ಮಂಜುನಾಥ್ ವಹಿಸಲಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸದಸ್ಯರುಗಳ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಗುವದು ಎಂದು ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಪಿ. ರವೀಂದ್ರ ತಿಳಿಸಿದ್ದಾರೆ.