ಸೋಮವಾರಪೇಟೆ, ಸೆ. 24: ಸ್ವಚ್ಛ ಭಾರತ್ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11 ವಾರ್ಡ್‍ಗಳಲ್ಲೂ ಕ್ರಮ ವಹಿಸಲಾಗಿದ್ದು, ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡುಬಂದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆಯನ್ನು ಪ.ಪಂ. ನೀಡಿದೆ.
ಪ.ಪಂ.ನ 11 ವಾರ್ಡ್‍ಗಳನ್ನು ಬಯಲು ಮುಕ್ತ ಶೌಚಾಲಯವೆಂದು ಘೋಷಿಸಲಾಗಿದೆ. ಬಯಲು, ರಸ್ತೆ, ಚರಂಡಿ ಎಲ್ಲೆಂದರಲ್ಲಿ ಮಲ-ಮೂತ್ರ ವಿಸರ್ಜನೆ ಮಾಡುವದು ಕಂಡುಬಂದರೆ ಸ್ಥಳದಲ್ಲಿಯೇ ದಂಡ ವಿಧಿಸಲಾಗುವದು ಎಂದು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದೆ.
ಇದರೊಂದಿಗೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು, ಹಸಿ-ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸ್ವಚ್ಚ ಪಟ್ಟಣವನ್ನಾಗಿಸಲು ಅನೇಕ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕರು ಮತ್ತು ಉದ್ದಿಮೆದಾರರು ನಿಯಮಗಳನ್ನು ಉಲ್ಲಂಘನೆ ಮಾಡಬಾರದು ಎಂದು ಎಚ್ಚರಿಕೆ ನೀಡಿದೆ.
ರಸ್ತೆ ಚರಂಡಿಗಳನ್ನು ಉತ್ತಮ ನಿರ್ವಹಣೆ ಮಾಡಲು ಈ ನಿಯಮಗಳನ್ನು ಜಾರಿಗೆ ತರಲಾಗಿದ್ದು, ನಿಯಮದನ್ವಯ ಬಯಲು, ರಸ್ತೆ, ಚರಂಡಿ ಎಲ್ಲೆಂದರಲ್ಲಿ ಮಲ-ಮೂತ್ರ ವಿಸರ್ಜನೆ ಮಾಡುವದು, ಹಸಿ ಒಳ ಕಸವನ್ನು ಬೇರ್ಪಡಿಸದೆ ನೀಡುವದು, ಎಸೆಯುವದು, ಸುಡುವದು ಕಂಡುಬಂದಲ್ಲಿ ರೂ. 100 ದಂಡ, ಇದರೊಂದಿಗೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ-ಬಳಕೆ ಮಾಡಿದಲ್ಲಿ ರೂ. 1000 ದಂಡ ವಿಧಿಸಲಾಗುವದು. ಆದ್ದರಿಂದ ಸಾರ್ವಜನಿಕರು ಪಟ್ಟಣದಲ್ಲಿ ನೈರ್ಮಲ್ಯತೆ ಕಾಪಾಡಲು ಪಂಚಾಯಿತಿಯೊಂದಿಗೆ ಸಹಕರಿಸಬೇಕೆಂದು ಮುಖ್ಯಾಧಿಕಾರಿ ನಟರಾಜ್ ಮನವಿ ಮಾಡಿದ್ದಾರೆ.