ಕಡಂಗ, ಸೆ. 25: ನರಿಯಂದಡ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮಸಭೆ ಅರಪಟ್ಟು ವಿಎಸ್ಎಸ್ಎನ್ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಬೇಬಿ ಶಿವಪ್ಪ ಅವರ ಅಧ್ಯಕ್ಷತೆಯಲ್ಲಿ ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು.
ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎನ್.ಟಿ. ಕಿರಣ್ ಕಾರ್ಯಪ್ಪ, ತಾ.ಪಂ. ಸದಸ್ಯೆ ಉಮಾಪ್ರಭು, ಪಂಚಾಯಿತಿ ಉಪಾಧ್ಯಕ್ಷ ಬಿ.ಎ. ರತೀಶ್ಕುಮಾರ್ ಹಾಗೂ ಸದಸ್ಯರುಗಳು, ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.