ಮಡಿಕೇರಿ, ಜ. 28: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ 30ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ನೀಡುವ ಪ್ರತಿಷ್ಠಿತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿಗೆ ಕರ್ನಾಟಕ ರಾಜ್ಯದ ಗಡಿನಾಡಿನಲ್ಲಿ ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನವು ಆಯ್ಕೆ ಆಗಿದೆ. ಈ ಪ್ರಶಸ್ತಿಯನ್ನು ತಾ. 30 ರಂದು ಕಾಸರಗೋಡಿನಲ್ಲಿ ನಡೆಯುವ 7ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ 2020 ಸಮಾರಂಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ. ರವಿ ಅವರಿಂದ ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ.ಎಂ. ಶಾಹಿದ್ ಅವರು ಪ್ರಶಸ್ತಿ ಸ್ವೀಕರಿಸುವರು.