ಮಡಿಕೇರಿ, ಜ. 28: ಕೊಡಗು ಜಿಲ್ಲೆಯ ಅಲ್ಲಲ್ಲಿ ಭಾರತದ 71ನೇ ಗಣರಾಜ್ಯೋತ್ಸವ ಆಚರಣೆಯಾಯಿತು. ರಾಷ್ಟ್ರ ಧ್ವಜಾರೋಹಣದೊಂದಿಗೆ ವಿಭಿನ್ನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಂಭ್ರಮಿಸಲಾಯಿತು.
ಎಫ್‍ಎಂಸಿ ಕಾಲೇಜು ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಪ್ರಜಾಸತ್ಯ ದಿನಪತ್ರಿಕೆ ಸಂಪಾದಕ ಡಾ. ನವೀನ್ ಧ್ವಜಾರೋಹಣ ನೆರವೇರಿಸಿ ಬಳಿಕ ಮುಖ್ಯ ಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿ, ದೇಶದ ಭವಿಷ್ಯವಾಗಿರುವ ಯುವಜನತೆ ಸಂವಿಧಾನ ಆಶಯಗಳಿಗೆ ಬದ್ಧರಾಗಿರಬೇಕೆಂದು ಕರೆ ನೀಡಿದರು. ಸಂವಿಧಾನವೆಂಬದು ಭಾರತೀಯ ವ್ಯವಸ್ಥೆಯ ದಿಕ್ಸೂಚಿಯಾಗಿದೆ. ಜೀವಂತ ದಾಖಲೆಯಾಗಿ ಉಳಿದಿದೆ. ಸ್ವಾತಂತ್ರ್ಯ, ಸಮಾನತೆ, ಹಕ್ಕುಗಳನ್ನು ಸಂವಿಧಾನ ನೀಡಿದ್ದು ಅದನ್ನು ಬಳಸಿಕೊಳ್ಳಬೇಕು. ಸರ್ಕಾರದ ಜವಾಬ್ದಾರಿ, ಪ್ರಜೆಗಳ ಹಕ್ಕಿನ ಬಗ್ಗೆ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾಪ್ರಭುತ್ವ ಉಳಿಯಬೇಕಾದರೆ ರಾಜಕೀಯ ಹಕ್ಕುಗಳ ಮೂಲಕ ಸಾಮಾಜಿಕ, ಆರ್ಥಿಕ ಬದಲಾವಣೆ ತರಬಹುದು. ಹಿಂಸೆ ಪ್ರತಿಪಾದಿಸುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ವ್ಯಕ್ತಿಪೂಜೆಗೆ ಸಂವಿಧಾನ ಸೀಮಿತಗೊಂಡರೆ ಪ್ರಜಾಪ್ರಭುತ್ವ ಮಾಯವಾಗಿ ಸರ್ವಾಧಿಕಾರ ಬರುತ್ತದೆ. ರಾಜಕೀಯ ವ್ಯವಸ್ಥೆಯಿಂದ ಮಾತ್ರ ಆರ್ಥಿಕ, ಸಾಮಾಜಿಕ ಬದಲಾವಣೆ ಸಾಧ್ಯ ಎಂದರು.
ಭಾರತ ದೇಶ ಸಮಾಜವಾದಿ, ಜಾತ್ಯತೀತ, ಪ್ರಜಾಪ್ರಭುತ್ವ, ಗಣತಂತ್ರ ವ್ಯವಸ್ಥೆಯಲ್ಲಿ ನಿಂತಿದ್ದು ಇದರ ಉಳಿವಿಗೆ ನಾವು ಕೈಜೋಡಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಜಗತ್ ತಿಮ್ಮಯ್ಯ, ನಮ್ಮ ದೇಶದ ಸಂವಿಧಾನ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು, ಬದಲಾಗಿ ಅದು ಸಮರ್ಪಕವಾಗಿ ಅನುಷ್ಠಾನವಾಗುವಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ. ಇ. ತಿಪ್ಪೇಸ್ವಾಮಿ, ಪದವಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರೇಣುಶ್ರೀ, ಇಂಗ್ಲೀಷ್ ಪ್ರಾಧ್ಯಾಪಕ ಅಲೋಕ್ ಬಿಜೈ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ರವಿಶಂಕರ್, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು, ಎನ್.ಸಿ.ಸಿ., ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುಂಟಿಕೊಪ್ಪ: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ 71ನೇ ಗಣರಾಜ್ಯೋತ್ಸವವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.
ನಂತರ ಮಾತನಾಡಿದ ಅವರು, ಮಹತ್ಮಾ ಗಾಂಧೀಜಿ, ಡಾ. ಅಂಬೇಡ್ಕರ್ ಅವರು ಸಂವಿಧಾನದ ಮೂಲ ಆಶಯ ಸಮಾಜದ ಎಲ್ಲಾ ವರ್ಗದವರ ಸಮಸ್ತ ಜನತೆಗೆ ಮೂಲಭೂತ ಸೌಲಭ್ಯ ದೊರಕಿಸಿಕೊಟ್ಟು, ಸಾಮಾಜಿಕವಾಗಿ, ಆರ್ಥಿಕವಾಗಿ ಎಲ್ಲರೂ ಗೌರವದಿಂದ ಜೀವನ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಸ್ಮರಿಸಿದರು.
ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ಪಂಚಾಯಿತಿ ಉಪಾಧ್ಯಕ್ಷ ಪಿ.ಆರ್. ಸುಕುಮಾರ್. ಸದಸ್ಯರಾದ ರತ್ನಾ ವಿಜಯನ್, ಗಿರಿಜಾ ಉದಯ, ನಾಗರತ್ನ ರೆಹನಾ ಫೈರೋಜ್, ಕೆ.ಇ. ಕರೀಂ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಅಂಬೇಡ್ಕರ್ ಸಂಘದ ಅಧ್ಯಕ್ಷ ಎಂ.ಎಸ್. ರವಿ, ಪಂಚಾಯಿತಿ ಸಿಬ್ಬಂದಿಗಳಾದ ಮಂಜುನಾಥ್ ಪೂಜಾರಿ, ಪುನೀತ್, ಶ್ರೀನಿವಾಸ್, ಸಂದ್ಯಾ ಹಾಜರಿದ್ದರು.
ವೀರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಎನ್.ಎಸ್.ಎಸ್. ಘಟಕದ ವತಿಯಿಂದ 71ನೇ ಗಣರಾಜ್ಯ ದಿನವನ್ನು ಆಚರಿಸಲಾಯಿತು.
ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು ಧ್ವಜಾರೋಹಣವನ್ನು ನೆರವೇರಿಸಿ, ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಈ ಸಂದರ್ಭ ವಿದ್ಯಾರ್ಥಿಗಳೆಲ್ಲರೂ ಭಾರತದ ಸಂವಿಧಾನದ ಪ್ರಸ್ತಾವನೆಯ ಮತ್ತು ಸಂವಿಧಾನದ ಆಶಯ ತತ್ವಗಳನ್ನು ಪಾಲಿಸುತ್ತೇವೆಂದು ಪ್ರತಿಜ್ಞೆ ಮಾಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ರೆ.ಫಾ. ರೋನಿ ರವಿಕುಮಾರ್, ಎನ್.ಎಸ್.ಎಸ್. ಅಧಿಕಾರಿ ಅರ್ಜುನ್, ವಿದ್ಯಾರ್ಥಿಗಳು, ವಿದ್ಯಾಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು ಹಾಜರಿದ್ದರು.
ಚೆಟ್ಟಳ್ಳಿ: ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್‍ನಲ್ಲಿ 71ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಎನ್.ಟಿ.ಸಿ. ಸಿಬ್ಬಂದಿಯಿಂದ ನೆರವೇರಿಸಿದರು.
ಈ ಸಂದರ್ಭ ವರ್ತಕ ಮುರುಳಿ, ಎನ್.ಟಿ.ಸಿ. ಮಾಲೀಕ ಅಬ್ದುಲ್ ಸಲಾಂ ರಾವತರ್, ವ್ಯವಸ್ಥಾಪಕ ಹಕೀಂ, ಕಚೇರಿ ಮುಖ್ಯಸ್ಥ ರಮೇಶ್, ಲೋಕೇಶ್, ತಪಾಸ್ ಹಾಗೂ ಸಿಬ್ಬಂದಿ ಇದ್ದರು.ಮುಳ್ಳೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಳ್ಳೂರಿನಲ್ಲಿ 71ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಎಸ್‍ಡಿಎಂಸಿ ಸದಸ್ಯೆ ಗೀತಾ ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು.
ಶಾಲಾ ಆವರಣದಲ್ಲಿ ನಿರ್ಮಿಸಿರುವ ಬೃಹತ್ ಭಾರತದ ಭೂಪಟ ಮಾದರಿಯಲ್ಲಿ ಸಂವಿಧಾನ ರಚನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ವಿವಿಧ ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಪ್ರದರ್ಶಿಸಲಾಯಿತು. ಅಲ್ಲದೆ ರಾಷ್ಟ್ರ ನಾಯಕರಿಗೆ ಪುಷ್ಪಗುಚ್ಛಗಳನ್ನು ಅರ್ಪಿಸಲಾಯಿತು. ಭಾರತದ ಸಾಂಸ್ಕೃತಿಕ ವೈಭವವನ್ನು ಸಾರುವ ಯಕ್ಷಗಾನ ವೀರಗಾಸೆ ಕಥಕ್ಕಳಿ ಸಾಂಸ್ಕøತಿಕ ವೇಷಗಳು, ಚಂದ್ರಶೇಖರ್ ಆಜಾದ್, ಓಬವ್ವ, ಜಾನ್ಸಿ ರಾಣಿ ಲಕ್ಷ್ಮೀಬಾಯಿ ಹೋರಾಟಗಾರರ ವೇಷಭೂಷಣಗಳಲ್ಲಿ ವಿದ್ಯಾರ್ಥಿಗಳು ಗಮನ ಸೆಳೆದರು. ವಿದ್ಯಾರ್ಥಿಗಳು ತಮ್ಮ ವಿನೂತನ ಶೈಲಿಯ ನಿರೂಪಣ ರೂಪದ ಭಾಷಣದಲ್ಲಿ ಸಂವಿಧಾನದ ಸಂಪೂರ್ಣವಾದ ಮಾಹಿತಿಯನ್ನು ಒದಗಿಸಿಕೊಟ್ಟರು. ಅಲ್ಲದೆ ಶಾಲೆಯ ಪ್ರತಿ ವಿದ್ಯಾರ್ಥಿಯು ದೇಶಭಕ್ತರ ಪರಿಚಯವನ್ನು ಮಾಡಿಕೊಟ್ಟಿದ್ದು ವಿಶೇಷವಾಗಿತ್ತು. ಮುಖ್ಯೋಪಾಧ್ಯಾಯರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಭಾರತದ ಸಂವಿಧಾನ ವಿಶ್ವದಲ್ಲಿ ಅತ್ಯಂತ ಮನ್ನಣೆಗೆ ಪಾತ್ರವಾದ ಸಂವಿಧಾನ ಎಂದು ತಿಳಿಸಿದರು. ವಿದ್ಯಾರ್ಥಿಗಳಿಂದ ನೆರವೇರಿಸಲ್ಪಟ್ಟ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾರತದ ಭಾವೈಕ್ಯತೆಯನ್ನು ಸಾರುವ ದೇಶಭಕ್ತಿ ಗೀತೆಗಳನ್ನು ಮಾಡಿದರಲ್ಲದೆ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಸಾರುವ ಸಣ್ಣದಾದ ಕಿರುನಾಟಕ ಪ್ರದರ್ಶನ ನೀಡಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.
ಶನಿವಾರಸಂತೆ: ದೇಶ, ದೇಶಪ್ರೇಮ ಎಂದಾಗ ನಿವೃತ್ತ ಸೈನಿಕರೂ ಸಂಘಟಿತರಾಗಿ ಒಗ್ಗಟ್ಟಿನಲ್ಲಿ ಬಲವಿದೆ ಎಂಬದನ್ನು ಸಾಬೀತುಪಡಿಸಬೇಕು ಎಂದು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಎಂ.ಎನ್. ಧರ್ಮಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ನಿವೃತ್ತ ಸೈನಿಕರ ಸಂಘದ ವತಿಯಿಂದ ನಡೆದ 71ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೈನಿಕರು ನಿವೃತ್ತರಾದರೂ ಶಿಸ್ತು, ಸಮಯ ಮತ್ತು ಕರ್ತವ್ಯ ಪ್ರಜ್ಞೆಯನ್ನು ಮರೆಯಬಾರದು. ಪರಸ್ಪರರು ಸಹಕಾರ ಮನೋಭಾವದಿಂದ ದೇಶ, ಸಮಾಜದ ಸೇವೆಗೆ ಕಂಕಣಬದ್ಧರಾಗಿ ಯುವ ಜನಾಂಗಕ್ಕೆ ಸ್ಫೂರ್ತಿ ನೀಡಬೇಕು ಎಂದರು.
ನಿರ್ದೇಶಕ ಕೆ.ವಿ. ಮಂಜುನಾಥ್ ಮಾತನಾಡಿ, ಸಂವಿಧಾನವನ್ನು ಗೌರವಿಸುವ ಪ್ರತಿ ಪ್ರಜೆಯೂ ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಪಾಲ್ಗೊಳ್ಳಬೇಕು. ಆಡಳಿತಾತ್ಮಕವಾಗಿ ರೂಪಿತವಾಗಿರುವ ಸಂವಿಧಾನ ರಚನೆಯ ಅರಿವನ್ನು ಮೊದಲಿಗೆ ಮೂಡಿಸಿಕೊಳ್ಳಬೇಕು ಎಂದರು.
ಕಾರ್ಯದರ್ಶಿ ಎಸ್.ಎನ್. ಪಾಂಡು ಮಾತನಾಡಿ, ಗಣರಾಜ್ಯೋತ್ಸವ ಆಚರಣೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಸ್ಮರಣೆ ಅತ್ಯಗತ್ಯವಾಗಿದ್ದು, ಪ್ರತಿ ನಾಗರಿಕರೂ ಸಂವಿಧಾನವನ್ನು ಗೌರವಿಸಬೇಕು ಎಂದರು. ಸಂಘದ ಗೌರವಾಧ್ಯಕ್ಷ ಎ.ಎಸ್. ಮಹೇಶ್ ಹಾಗೂ ಸದಸ್ಯರಾದ 58 ನಿವೃತ್ತ ಸೈನಿಕರು ಉಪಸ್ಥಿತರಿದ್ದರು.
ಮೇಕೇರಿ: ಭಾರತೀಯ ಜನತಾ ಪಕ್ಷದ ಮೇಕೇರಿ ಬೂತ್ ವತಿಯಿಂದ 71ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬಿಜೆಪಿ ಮೇಕೇರಿ ಬೂತ್‍ನ ಪ್ರಧಾನ ಕಾರ್ಯದರ್ಶಿ ಅಲಗರಾಜ್ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ, ಪ್ರಪಂಚದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆ ನಮ್ಮ ದೇಶಕ್ಕಿದೆ. ಡಾ. ಬಿ.ಆರ್. ಅಂಬೇಡ್ಕರ್ ನೀಡಿರುವ ಸಂವಿಧಾನದ ರಕ್ಷಣೆ ಮತ್ತು ಕಟ್ಟುನಿಟ್ಟಿನ ಪಾಲನೆಗೆ ಪ್ರತಿಯೊಬ್ಬ ಭಾರತೀಯರು ಬದ್ಧರಾಗಬೇಕೆಂದರು.
ದೇಶ ಮೊದಲು ಎಂಬ ಭಾವನೆ ಹುಟ್ಟಿಸುವ ಸಲುವಾಗಿ ಬೂತ್ ಮಟ್ಟದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದು ಬೋಪಯ್ಯ ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಾರತಮಾತೆಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯೆ ಕುಮುದಾ ರಶ್ಮಿ, ಮೇಕೇರಿ ಗ್ರಾಮ ಪಂಚಾಯಿತಿ ಸದಸ್ಯರು, ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.
ಪೊನ್ನಂಪೇಟೆ ಬಿ.ಜೆ.ಪಿ. ಕಚೇರಿ: ಭಾರತೀಯ ಜನತಾ ಪಕ್ಷದಿಂದ ಪೊನ್ನಂಪೇಟೆ ಕಚೇರಿಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಪೊನ್ನಂಪೇಟೆಯ 6 ವಾರ್ಡ್‍ಗಳ ಭೂತ್ ಅಧ್ಯಕ್ಷರ ಮನೆಗಳಿಗೆ ತೆರಳಿ, ಮನೆಯ ಮೇಲೆ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆಯೊಂದಿಗೆ ರಾಷ್ಟ್ರಗೀತೆಯನ್ನು ಹಾಡಲಾಯಿತು.
ಪಕ್ಷದ ಪರವಾಗಿ ಮಿಸ್ಡ್ ಕಾಲ್ ಕೊಟ್ಟು ಪ್ರಧಾನಮಂತ್ರಿ ಮೋದಿ ಅವರಿಗೆ ಪೌರತ್ವ ಕಾಯ್ದೆ ಬೆಂಬಲಿಸಿ ಪತ್ರ ಬರೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪೊನ್ನಂಪೇಟೆ ಸ್ಥಾನೀಯ ಸಮಿತಿ ಅಧ್ಯಕ್ಷ ಮುದ್ದಿಯಡ ಮಂಜು ಗಣಪತಿ, ಕಾರ್ಯದರ್ಶಿ ಅಮ್ಮತ್ತೀರಾ ಸುರೇಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾರ್ಡ್ ಅಧ್ಯಕ್ಷರುಗಳಾದ ಎಂ.ಎ. ವಿಜು, ಅಮ್ಮತ್ತೀರಾ ಸುರೇಶ್, ಪಿ.ವಿ. ವೈಶಾಕ್, ಹೆಚ್.ಎಸ್. ಮಹೇಶ್, ಕೆ.ಬಿ. ವಿನು, ಹೆಚ್.ಜಿ. ಮನು, ಗ್ರಾಮ ಪಂಚಾಯಿತಿ ಸದಸ್ಯರಾದ ಮೂಕಳೇರ ಕಾವ್ಯ, ಬೊಟ್ಟಂಗಡ ದಶಮಿ, ಮೂಕಳೇರ ಲಕ್ಷ್ಮಣ್, ಜಯಲಕ್ಷ್ಮಿ ಹಾಗೂ ಭಾ.ಜ.ಪಾ. ಜಿಲ್ಲಾ ಸಮಿತಿ ಸದಸ್ಯ ಕಬೀರ್ ದಾಸ್, ರೇಖಾ ಶ್ರೀಧರ್, ತಾಲೂಕು ಸಮಿತಿ ಸದಸ್ಯೆ ಪಿ.ಕೆ. ರಜಿನಿ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.ನಾಪೆÇೀಕ್ಲು: ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು ಧ್ವಜಾರೋಹಣ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಲತಾ ವಹಿಸಿದ್ದರು. ನರಿಯಂದಡ ಗ್ರಾಮ ಪಂಚಾಯಿತಿ ಸದಸ್ಯೆ ಐತಿಚಂಡ ವನಿತಾ ಪ್ರಕಾಶ್, ಮಾಜಿ ಸದಸ್ಯೆ ನೆರ್ಪಂಡ ಸುಶಾ ಮೊಣ್ಣಯ್ಯ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಪೆÇೀಷಕರು ಉಪಸ್ಥಿತರಿದ್ದರು. ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮುಖ್ಯ ಶಿಕ್ಷಕಿ ಡಿ.ಕೆ. ಲೀಲಾವತಿ ಸ್ವಾಗತಿಸಿ, ವಂದಿಸಿದರು.
ಮೂರ್ನಾಡು: ಇಲ್ಲಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ 71ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶೀಲ ಅಬ್ದುಲ್ಲಾ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಕಿ ಪಿ.ಕೆ. ಶೋಭಾ ಮುಖ್ಯ ಅತಿಥಿಗಳಾಗಿ ಸಂವಿಧಾನದ ಕುರಿತು ಮಾತನಾಡಿದರು. ಶಾಲಾ ಶಿಕ್ಷಕಿ ಕೃತಿಕ ಅಧ್ಯಕ್ಷತೆ ವಹಿಸಿ ದಿನದ ಮಹತ್ವ ಕುರಿತು ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಮೊದಲಾದ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳಾದ ಬಿ.ಟಿ. ಲಿಪಿಕ ಕಾರ್ಯಕ್ರಮ ನಿರೂಪಿಸಿ, ಮೊಹಮ್ಮದ್ ಶಾನಿಫ್ ಸ್ವಾಗತಿಸಿ, ಎಸ್. ಮೌರ್ಯ ವಂದಿಸಿದರು.
ಬೊಟ್ಲಪ್ಪ ಯುವ ಸಂಘ: ಶ್ರೀ ಬೊಟ್ಲಪ್ಪ ಯುವ ಸಂಘದ ವತಿಯಿಂದ ಯುವ ಸಂಘದ ಆವರಣದಲ್ಲಿ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಧ್ವಜಾರೋಹಣವನ್ನು ಸಂಘದ ಹಿರಿಯ ಸದಸ್ಯ ಪಿ.ಎಂ. ಸುರೇಶ್ ನೆರವೇರಿಸಿದರು. ನಂತರ ಸರ್ವರಿಂದ ರಾಷ್ಟ್ರಗೀತೆ ಮೊಳಗಿತು. ದಿನದ ಕುರಿತು ಸಂಘದ ಸದಸ್ಯ ಬಿ.ಎಂ. ಶಿವಕಾಂತ್ ಮಾತನಾಡಿ, ಭಾರತದ ಸಂವಿಧಾನದ ರಚನೆ, ಅದರಲ್ಲಿರುವ ಶಾಸನ ಹಕ್ಕುಗಳು ಕರ್ತವ್ಯಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಯುವ ಸಂಘದ ಸದಸ್ಯರುಗಳು ಹಾಜರಿದ್ದರು. ಕಾರ್ಯಕ್ರಮವನ್ನು ಅವಿನಾಶ್ ಬೊಟ್ಲಪ್ಪ ನಿರೂಪಿಸಿ, ಸ್ವಾಗತಿಸಿದರು. ಅರ್ಜುನ್ ಕೆ.ಬಿ. ವಂದಿಸಿದರು.
ಪೊನ್ನಂಪೇಟೆ: ಇಲ್ಲಿನ ನ್ಯಾಯಾಲಯದಲ್ಲಿ ಸಂವಿಧಾನದ ಆಶೋತ್ತರಗಳ ಕುರಿತು ಪೊನ್ನಂಪೇಟೆ ನ್ಯಾಯಾಧೀಶ ಗಿರಿಗೌಡ ಅವರು ಮಾತನಾಡಿದರು. ವಕೀಲ ರಫೀಕ್ ನವಲ್‍ಗುಂದ ಮಾತನಾಡಿ, ಸಂವಿಧಾನದ ರಚನೆ ಹಾಗೂ ಗಣರಾಜೋತ್ಸವದ ಮಹತ್ವವನ್ನು ವಿವರಿಸಿದರು. ವಕೀಲರ ಸಂಘದ ಅಧ್ಯಕ್ಷ ಎಸ್.ಡಿ. ಕಾವೇರಪ್ಪ ಗಣರಾಜೋತ್ಸವದ ಬಗ್ಗೆ ಸಭೆಯನ್ನುದ್ದೇಶಿಸಿ ಮಾತನಾಡಿದರು,
ನ್ಯಾಯಾಲಯದ ಸಿಬ್ಬಂದಿ ವರ್ಗದ ಕವಿತಾ ಪ್ರಾರ್ಥಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಕೆ.ಡಿ. ಮುತ್ತಪ್ಪ ನಿರೂಪಿಸಿ, ಸ್ವಾಗತ ಕೋರಿದರು. ಕಾರ್ಯದರ್ಶಿ ಎಂ.ಜಿ. ರಾಕೇಶ್, ವಕೀಲರಾದ ಬಿ.ಆರ್. ವಿನೋದ್, ಸಿ.ಬಿ. ಅನಿತ, ಎಂ.ಸಿ. ಪೂವಣ್ಣ, ಬಿ.ಎಸ್. ಕುಮಾರಿ, ಯು.ಎಸ್. ಸುರೇಶ್, ಎ.ಕೆ. ಮೋನಿ, ಎಸ್.ಕೆ. ದ್ಯಾನ್, ಜೆ.ಎಸ್. ಜ್ಯೋತಿ ಹಾಗೂ ನ್ಯಾಯಾಂಗ ಇಲಾಖಾ ನೌಕರರು, ಆರಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು.ಮಡಿಕೇರಿ ಕಾಂಗ್ರೆಸ್ ಕಚೇರಿ: ದೇಶದ ಸಂವಿಧಾನ ಪ್ರತಿಯೊಬ್ಬ ಭಾರತೀಯನಿಗೆ ಸಮಾನತೆಯ ಹಕ್ಕುಗಳನ್ನು ಒದಗಿಸಿಕೊಟ್ಟಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 71ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕೆಪಿಸಿಸಿ ಸದಸ್ಯ ಟಿ.ಪಿ. ರಮೇಶ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು ಮತ್ತು ಎಲ್ಲರಿಗೂ ಸಮಾನ ಅವಕಾಶವಿದೆ ಎಂದರು.
ಜಿ.ಪಂ. ಸದಸ್ಯೆ ಕುಮುದಾ ಧರ್ಮಪ್ಪ, ಡಿಸಿಸಿ ಸದಸ್ಯ ಎಂ.ಈ. ಹನೀಫ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕಲೀಲ್ ಬಾಷಾ ಮಾತನಾಡಿದರು.
ಮಡಿಕೇರಿ ಯುವ ಕಾಂಗ್ರೆಸ್ ಅಧ್ಯಕ್ಷ ಸದಾ ಮುದ್ದಪ್ಪ, ಮೂಡಾ ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ನಗರಸಭಾ ಮಾಜಿ ಸದಸ್ಯರುಗಳಾದ ಜುಲೇಕಾಬಿ, ತಜಸ್ಸುಂ, ಪ್ರಕಾಶ್ ಆಚಾರ್ಯ, ಗೀತಾ ಧರ್ಮಪ್ಪ, ಸಜಿ, ಕಾನೆಹಿತ್ಲು ಮೊಣ್ಣಪ್ಪ, ನಗರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಮೊದಲಾದವರು ಪಾಲ್ಗೊಂಡಿದ್ದರು.
ಸಿದ್ದಾಪುರ: ಗಣರಾಜ್ಯೋತ್ಸವದ ಅಂಗವಾಗಿ ಇಲ್ಲಿಯ ಯುವಕರು ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಸಂವಿಧಾನದ ಮೂಲ ಆಶಯಗಳನ್ನು ನೆನಪಿಸಿಕೊಂಡರು.
ಮೈಸೂರು ರಸ್ತೆಯ ಆಟದ ಮೈದಾನದಲ್ಲಿ ಸಾಮಾಜಿಕ ಕಾರ್ಯಕರ್ತ ಎ.ಎಸ್. ಮುಸ್ತಫಾ ನೇತೃತ್ವದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಫೋಟೋ, ರಾಷ್ಟ್ರಧ್ವಜ ಹಾಗೂ ಸಂವಿಧಾನದ ಪೀಠಿಕೆಯ ಪ್ರತಿಯೊಂದಿಗೆ ಒಟ್ಟು ಸೇರಿದ ವಿದ್ಯಾರ್ಥಿಗಳು ಹಾಗೂ ಯುವಕರು ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತೇವೆಂದು ಪ್ರತಿಜ್ಞೆ ಮಾಡಿದರು.
ಈ ಸಂದರ್ಭ ನೌಫಲ್, ಪ್ರಶಾಂತ್, ಸಿರಾಜ್, ಆಶಿಕ್, ಸುನಿಲ್, ನಿಯಾಸ್, ಹರೀಶ ಸೇರಿದಂತೆ ಇತರರು ಇದ್ದರು.ಕೂಡುಮಂಗಳೂರು ಗ್ರಾಮ ಪಂಚಾಯಿತಿ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಆವರಣದಲ್ಲಿ 71ನೇ ಗಣರಾಜ್ಯೊತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಮಿ ರವಿ ನೆರವೇರಿಸಿದರು.
ನಂತರ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಣ್ಣಪ್ಪ ಸೇರಿದಂತೆ ಸರ್ವ ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಆಯಿಷಾ ಕಾರ್ಯದರ್ಶಿ ಮಾದಪ್ಪ ಅವಿನಾಶ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಸುಂಟಿಕೊಪ್ಪ: ಸಮೀಪದ ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್.ಎಸ್. ಚೆಟ್ಟಳ್ಳಿಯಲ್ಲಿ ತಾಲೂಕು ಪಂಚಾಯಿತಿ ಅನುದಾನದಲ್ಲಿ ನೂತನವಾಗಿ ನಿರ್ಮಿಸಿದ ರಂಗ ಮಂದಿರವನ್ನು ಗಣರಾಜ್ಯೋತ್ಸವ ಸಂದರ್ಭ ಚೆಟ್ಟಳ್ಳಿ ಕ್ಷೇತ್ರ ತಾಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಲೋಕಾರ್ಪಣೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಶಾಲಾ ಮಕ್ಕಳು ವಿದ್ಯಾಭ್ಯಾಸದೊಂದಿಗೆ ಸೂಕ್ತ ರೀತಿಯಲ್ಲಿ ರಂಗಮಂದಿರವನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಹೊರತರಬೇಕು. ಮಕ್ಕಳಿಗೆ ತಮ್ಮ ಪ್ರತಿಭೆ ಹೊರಹೊಮ್ಮಿಸಲು ಹಲವು ಅವಕಾಶಗಳು ಲಭ್ಯವಾಗುತ್ತದೆ. ಆದರೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸೂಕ್ತ ವೇದಿಕೆ ಲಭ್ಯವಾಗಲು ಕಷ್ಟವಾಗಿರುವುದನ್ನು ಮನಗಂಡು ಸರಕಾರ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ದೇಶ ರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯೆ ಮೇರಿ ಅಂಬುದಾಸ್, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸಕೀನ, ಚೆಟ್ಟಳ್ಳಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಅಶೋಕ್, ಶಾಲಾ ಮಖ್ಯೋಪಾಧ್ಯಾಯಿನಿ ಸರೋಜಿನಿ, ಸಹ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.