ಸುಂಟಿಕೊಪ್ಪ, ಜ. 28: ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮತದಾನದ ಜಾಗೃತಿ ಮೂಡಿಸಲು ಇಲ್ಲಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಟ್ಟಣದಲ್ಲಿ ಶನಿವಾರ ಜಾಗೃತಿ ಜಾಥಾ ನಡೆಸಿದರು.

ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ಚುನಾವಣಾ ಸಾಕ್ಷರತ ಕ್ಲಬ್‍ವತಿಯಿಂದ ಚುನಾವಣಾ ಆಯೋಗ ಜಾರಿಗೆ ದಿನದಂದು ಮತದಾರರಲ್ಲಿ ಅರಿವು ಮೂಡಿಸಲು ಶ್ರೇಷ್ಟ ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ, ಮತದಾನದ ಹಕ್ಕು, ಪ್ರತಿಯೊಬ್ಬ ಪ್ರಜೆಯು ಕಡ್ಡಾಯ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಘೋಷಣೆಗಳೊಂದಿಗೆ ವಿದ್ಯಾರ್ಥಿಗಳು ಜಾಥದಲ್ಲಿ ಪಾಲ್ಗೊಂಡು ಮತದಾನದಲ್ಲಿ ಪ್ರತಿಯೊಬ್ಬ ಪ್ರಜೆಗಳು ಭಾಗವಹಿಸಬೇಕೆಂಬ ಸಂದೇಶವನ್ನು ರವಾನಿಸಿದರು.

ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಕೊಡಗು ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.