ವೀರಾಜಪೇಟೆ, ಜ. 28: ಒಬ್ಬ ಮತದಾರನ ಒಂದು ಮತ ದೇಶದ ಭದ್ರತೆಯನ್ನು ನಿರ್ಧರಿಸುತ್ತದೆ. ಪ್ರತಿಯೊಬ್ಬ ಪ್ರಜೆಯೂ ಮತದಾನದಲ್ಲಿ ಭಾಗವಹಿಸಬೇಕೆಂದು ನಿವೃತ್ತ ಕಂದಾಯ ಅಧಿಕಾರಿ ಟಿ.ಸಿ. ಚಂದ್ರನ್ ಅಭಿಪ್ರಾಯಪಟ್ಟರು.

ಕಾವೇರಿ ಕಾಲೇಜು ವೀರಾಜಪೇಟೆಯ ರಾಜ್ಯ ಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಟಿ.ಸಿ. ಚಂದ್ರನ್, ಯಾರು ಮತದಾನ ಮಾಡುತ್ತಾರೊ ಅವರು ಮಾತ್ರ ದೇಶದ ಪ್ರಜೆಯಾಗಲು ಸಾಧ್ಯ. ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರಕ್ಕೆ ಮತದಾರ ಆಗಲಾರ. ತಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ತಮ್ಮನ್ನು ತಾವು ಗುರುತಿಸಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಹಕ್ಕು ಕೇಳುತ್ತಾರೆ ಆದರೆ ತಮ್ಮ ಕರ್ತವ್ಯವನ್ನು ಯಾಕೆ ಪಾಲಿಸುವುದಿಲ್ಲ ಎಂದು ಪ್ರಶ್ನಿಸಿದರು. ಕರ್ತವ್ಯವನ್ನು ಪಾಲಿಸಿದರೆ ಹಕ್ಕು ತನ್ನಿಂದ ತಾನೆ ಬರುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆÀ ಪೆÇ್ರ.ಇಟ್ಟಿರ ಕಮಲಾಕ್ಷಿ ಮಾತನಾಡಿ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಮತದಾನದಲ್ಲಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬೆಳೆಸಬೇಕು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತ ಚಲಾವಣೆ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದರು. ನಂತರ ವಿದ್ಯಾರ್ಥಿಗಳಿಗೆ ಮತದಾನದ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಆನಂದಕಾರ್ಲ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಗಾಯತ್ರಿ ಮತ್ತು ಮಂದೇಯಂಡ ವನಿತ್ ಕುಮಾರ್, ಕನ್ನಡ ವಿಭಾಗದ ಪ್ರಾಧ್ಯಾಪಕ ಶಂಕರನಾರಾಯಣ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿ ಕಾವೇರಪ್ಪ ಕಾರ್ಯಕ್ರಮ ನಿರ್ವಹಿಸಿದರು.