ಮಡಿಕೇರಿ, ಜ. 30: ಕೊಡಗು ಜಿಲ್ಲೆ ಅನುದಾನರಹಿತ ಶಾಲೆಗಳ ಒಕ್ಕೂಟ ಇದರ ವತಿಯಿಂದ ಫೆ.1ರಂದು ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಸಮ್ಮಿಲನ ಕಾರ್ಯಕ್ರಮವನ್ನು ಕುಶಾಲನಗರದ ಉದ್ಗಂ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ.
ಕೊಡಗಿನ ಶಿಕ್ಷಣ ಸಂಸ್ಥೆಗಳಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ಶಿಕ್ಷಕ/ ಶಿಕ್ಷಕಿಯರಲ್ಲಿ ಒಬ್ಬರಿಗೆ ಸಂಸ್ಥೆಯು ‘‘ಸಂಸ್ಥಾ ಉತ್ತಮ ಶಿಕ್ಷಕ ಪ್ರಶಸ್ತಿ’’ಯನ್ನು ಕೊಡುವ ತೀರ್ಮಾನವನ್ನು ಕೈಗೊಂಡಿದೆ. ಸಮ್ಮಿಲನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ವಿತರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಕೊಡಗಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕೊಡಗಿನ 3 ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೋಳೆರ ಝರು ಗಣಪತಿ, ಉಪಾಧ್ಯಕ್ಷ ದಾಮೋದರ್, ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ, ಸದಸ್ಯ ಸಚಿನ್ ತಿಳಿಸಿದ್ದಾರೆ.