ಸಂಪಾಜೆ, ಜ. 30: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಡಿಕೇರಿ ಇವರ ಆಶ್ರಯದಲ್ಲಿ ಕಲ್ಲಳ ಗ್ರಾಮದಲ್ಲಿ ಅಲೆಮಾರಿ / ಅರೆ ಅಲೆಮಾರಿ ಜನಾಂಗದವರಿಗೆ ಅರಿವು ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಚೆದ್ಕಾರ್ ವಹಿಸಿದ್ದರು. ತಾ.ಪಂ. ಸದಸ್ಯರಾದ ನಾಗೇಶ್ ಕುಂದಲ್ಪಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕವಿತ ಇಲಾಖೆಯ ವಿವಿಧ ಕಾರ್ಯಕ್ರಮಗಳು, ಅವುಗಳ ಅನುಷ್ಠಾನ, ಸೌಲಭ್ಯಗಳನ್ನು ಗ್ರಾಮಸ್ಥರಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯೆ ಯಮುನಾ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶೋಭರಾಣಿ, ಪೆರಾಜೆ, ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮಿ ಧರಣಿಧರ, ಗ್ರಾಮದ ಹಿರಿಯರು, ಸಹಕಾರಿ ಸಂಘದ ನಿರ್ದೇಶಕರು, ಗ್ರಾಮಸ್ಥರು ಉಪಸ್ಥಿತರಿದ್ದರು. ಯಮುನಾ ಪ್ರಾರ್ಥಿಸಿ, ಶ್ರೀಧರ್ ಸ್ವಾಗತಿಸಿ, ನಿರೂಪಿಸಿದರು.