ಮಡಿಕೇರಿ, ಜ.30: ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಗಣರಾಜ್ಯೋತ್ಸವ ದಿನಾಚರಣೆ” ಕಾರ್ಯಕ್ರಮದ ಅಂಗವಾಗಿ ತಾ. 31 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ (ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರ) ಚಿತ್ರಕಲೆ ಹಾಗೂ ಛದ್ಮವೇಷ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.
ಸ್ಪರ್ಧೆಯನ್ನು ನಡೆಸುವುದರೊಂದಿಗೆ, ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ 3 ವಿಭಾಗಗಳಾಗಿ ವಿಂಗಡಿಸಿ 5 ರಿಂದ 16 ವರ್ಷ (5-8, 9-12, 13-16) ವಯಸ್ಸಿನ ಮಕ್ಕಳಿಗೆ ಚಿತ್ರಕಲೆ ಹಾಗೂ ಛದ್ಮವೇಷ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಜೇತ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂ.8618861505, 6363285685 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.