ಮಡಿಕೇರಿ, ಜ. 30: ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆ ಮತ್ತಷ್ಟು ಪ್ರಗತಿಯನ್ನು ಸಾಧಿಸುವುದಕ್ಕೆ ಪೂರಕವಾಗಿ ಕೊಡಗು ಜಿಲ್ಲಾ ಅನುದಾನರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಫೆ. 1 ರಂದು ಕುಶಾಲನಗರದ ಉದ್ಗಂ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಮಹಾಸಭೆ ಹಾಗೂ ‘ಸಮ್ಮಿಲನ’ ಸಮಾರಂಭ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷÀ ಕೋಳೆರ ಝರು ಗಣಪತಿ ಅವರು, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ 106 ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಗುಣ ಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ಒದಗಿಸುವ ಮೂಲಕ ಸಮಾಜದ ಪ್ರಗತಿಗೆ ಕಾಣಿಕೆಯನ್ನು ನೀಡುತ್ತಾ ಬಂದಿದೆ. ಇಂತಹ ಪ್ರತಿ ಶಿಕ್ಷಣ ಸಂಸ್ಥೆಯ ಓರ್ವ ಶಿಕ್ಷಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದರು. ಅನುದಾನ ರಹಿತ ಶಾಲೆಗಳ ಒಕ್ಕೂಟ 2009 ರಲ್ಲಿ ಮೇಜರ್ ದೇವಯ್ಯ ಅವರು ಸ್ಥಾಪಿಸಿದ ಬಳಿಕ ವರ್ಷಂಪ್ರತಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿ ಕೊಂಡು ಬರುವ ಮೂಲಕ, ಶಿಕ್ಷಣ ಇಲಾಖಾ ಅಧಿಕಾರಿಗಳು, ಅನುದಾನ ರಹಿತ ಶಾಲಾ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗಳೊಂದಿಗೆ ಸಂವಾದವನ್ನು ಏರ್ಪಡಿಸುವ ಮೂಲಕ ಶಿಕ್ಷಣದ ಉನ್ನತೀಕರಣಕ್ಕೆ ಪೂರಕವಾದ ವಿಚಾರಗಳನ್ನು ಕಂಡುಕೊಳ್ಳುವ ಪ್ರಯತ್ನಗಳನ್ನು ನಡೆಸುತ್ತಿರುವುದಾಗಿ ಝರು ಗಣಪತಿ ತಿಳಿಸಿದರು. ಫೆ.1 ರಂದು ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖಾ ಉಪ ನಿರ್ದೇಶಕ ಮಚ್ಚಾಡೋ, ತಾಲೂಕು ಶಿಕ್ಷಣಾಧಿ ಕಾರಿಗಳಾದ ಗಾಯಿತ್ರಿ, ಪಾಂಡು ಮತ್ತು ಶ್ರೀಶೈಲ ಬಿಳಗಿ ಅತಿಥಿಗಳಾಗಿ ಉಪಸ್ಥಿತರಿದ್ದು, ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಒಕ್ಕೂಟದ ಉಪಾಧ್ಯಕ್ಷ ದಾಮೋದರ್, ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ, ಸದಸ್ಯರಾದ ಸÀಚಿನ್, ಲಿಖಿತ್ ಹಾಗೂ ರಶ್ಮಿ ಉಪಸ್ಥಿತರಿದ್ದರು.