ಕುಶಾಲನಗರ, ಜ. 31: ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಆವರಣವನ್ನು ದಾನಿಗಳ ಸಹಕಾರದೊಂದಿಗೆ ಅಭಿವೃದ್ಧಿಗೊಳಿಸಲಾಗಿದೆ. ಸ್ಥಳೀಯ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ಆಸ್ಪತ್ರೆಯ ಆವರಣದಲ್ಲಿ ಸುಮಾರು ರೂ. 3 ಲಕ್ಷ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ ಮಾಡಿದ್ದು, ದಾನಿಗಳನ್ನು ಸನ್ಮಾನಿಸಲಾಯಿತು.

ಆರ್ಯವೈಶ್ಯ ಮಂಡಳಿ ಅಧ್ಯಕ್ಷ ವಿ.ಪಿ. ನಾಗೇಶ್, ಬಿಎಸ್‍ಆರ್ ಸಂಸ್ಥೆಯ ಪ್ರಮುಖರಾದ ಬಿ.ಎಸ್. ಜಗದೀಶ್, ವಿ.ಎಂ. ವಿಜಯ, ಬಾಬು ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಬಿ. ಅಮೃತ ರಾಜ್ ಮಾತನಾಡಿ, ಆಸ್ಪತ್ರೆಯ ಆವರಣವನ್ನು ಸ್ವಚ್ಛವಾಗಿಡುವಲ್ಲಿ ಆರೋಗ್ಯ ಇಲಾಖೆಯೊಂದಿಗೆ ನಾಗರಿಕರು ಸಹಕರಿಸಬೇಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್ ಮಾತನಾಡಿ, ಕಣ್ಣಿನ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಮಾಡಿದರು. ಈ ಸಂದರ್ಭ ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ಮಂಜುಳಾ, ಶ್ರೀನಿವಾಸ್, ವಕೀಲ ಆರ್.ಕೆ. ನಾಗೇಂದ್ರಬಾಬು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್, ಎಸ್.ಎನ್. ನರಸಿಂಹಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ, ದಂತ ವೈದ್ಯೆ ಡಾ. ಅಂಜಲಿ, ಡಾ. ಮಧುಸೂಧನ್ ಮತ್ತಿತರರು ಇದ್ದರು.