ಮಡಿಕೇರಿ, ಜ. 31: ಜಿ.ಪಂ. ನಿಧಿಯಿಂದ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಮೂಲಕ 17 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಭೂಮಿಪೂಜೆ ನೆರವೇರಿಸಿದರು.
ಕಳತ್ಮಾಡು ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗಿದ್ದು ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸ ಬೇಕೆಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
ಸಾರ್ವಜನಿಕರು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ ಅವರು ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಜಾಗ ದಾನ ನೀಡಿದ ಕೊಲ್ಲಿರ ಕುಟುಂಬಸ್ಥರಿಗೆ ಅಭಿನಂದನೆ ಸಲ್ಲಿಸಿದರು.
ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಗೋಪಿ ಚಿಣ್ಣಪ್ಪ ಮಾತನಾಡಿ ಕಳೆದ ಹಲವು ವರ್ಷಗಳಿಂದ ಕಳತ್ಮಾಡು ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಗ್ರಾಮಸ್ಥರ ಪರವಾಗಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ವಿಜು ಸುಬ್ರಮಣಿ ಅವರು ತಕ್ಷಣ ಸ್ಪಂದಿಸಿ ಟ್ಯಾಂಕ್ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ ಸದ್ಯದಲ್ಲೇ ನೀರಿನ ಸಮಸ್ಯೆ ಬಗೆಹರಿಯಲಿದ್ದು ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ತಾಲೂಕು ಪಂಚಾಯತಿ ಸದಸ್ಯ ಕುಟ್ಟಂಡ ಅಜಿತ್ ಕರುಂಬಯ್ಯ ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಧರ್ಮಜ ಉತ್ತಪ್ಪ, ಹೊಸೂರು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕೊಲ್ಲಿರ ತನು, ಕಾವೇರಮ್ಮ ಪ್ರಮುಖರಾದ ಕೊಲ್ಲಿರ ಉಮೇಶ್, ಸುಬ್ಬಯ್ಯ, ವಿಜು, ಉತ್ತಪ್ಪ, ಪಿ.ಸಿ ತಮ್ಮಯ್ಯ, ಅಪ್ಪಣ್ಣ, ಕುಪ್ಪಂಡ ಜಪ್ಪು, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಗಣಪತಿ, ಮಾಜಿ ಅಧ್ಯಕ್ಷ ಕುಟ್ಟಂಡ ವಸಂತ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.