ವೀರಾಜಪೇಟೆ: ವಿದ್ಯಾರ್ಥಿ ಜೀವನದಲ್ಲಿ ಸ್ವಾಮಿ ವಿವೇಕಾನಂದರ ತತ್ವ ಉಪದೇಶಗಳನ್ನು ಮೈಗೂಡಿಸಿಕೊಂಡರೆ ಉತ್ತಮ ಪ್ರಜೆಯಾಗಬಹುದು ಎಂದು ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದ್ಜಿ ಮಹಾರಾಜ್ ಅವರು ನುಡಿದರು.
ವೀರಾಜಪೇಟೆಯ ಕಾವೇರಿ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಕೌಸ್ತುಭ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೂತಂಡ ಪೂವಯ್ಯ ಮತ್ತು ಪಾರ್ವತಿ ಪೂವಯ್ಯ ಸ್ಮರಣಾರ್ಥ 25ನೇ ವರ್ಷದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ವಿವೇಕಾನಂದರ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡರೆ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.
ದಿ. ಕೂತಂಡ ಪೂವಯ್ಯ ಮತ್ತು ಪಾರ್ವತಿ ಪೂವಯ್ಯ ಅವರ ಪುತ್ರ ಹಾಗೂ ದಾನಿಗಳಾದ ಕೂತಂಡ ಉತ್ತಪ್ಪ ಮಾತನಾಡಿ ಪ್ರತೀ ವರ್ಷ ಸ್ವಾಮಿ ವಿವೇಕಾನಂದರ ಬಗ್ಗೆ ಕಾಲೇಜು ಮಟ್ಟದಲ್ಲಿ ಭಾಷಣ ಸ್ಪರ್ಧೆಯನ್ನು ಏರ್ಪಡಿಸುವುದರ ಮುಖಾಂತರ ಯವಜನರಲ್ಲಿ ವಿವೇಕಾನಂದರ ಜೀವನ ಸಂದೇಶಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಇದರೊಂದಿಗೆ ಇತರ ದಾರ್ಶನಿಕರ ಸಾಧನೆಯ ಬಗ್ಗೆ ಅರಿತುಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎ ಎಂ.ಕಮಲಾಕ್ಷಿಯವರು ವಹಿಸಿದ್ದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ ಹಾಗೂ ಸಂಚಾಲಕಿ ಸಿ.ಎಂ. ರೇವತಿ ಉಪಸ್ಥಿತರಿದ್ದರು.
ಪದವಿ ಮತ್ತು ಸ್ನಾತಕೋತ್ತರ ಕನ್ನಡ ವಿಭಾಗ ಭಾಷಣದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮಡಿಕೇರಿಯ ವಿನಯ್ ಪ್ರಥಮ, ಕಾವೇರಿ ಕಾಲೇಜು ವೀರಾಜಪೇಟೆಯ ವಿನಿಷಾ ದ್ವಿತೀಯ, ಸಂತ ಅನ್ನಮ್ಮ ಕಾಲೇಜು ವೀರಾಜಪೇಟೆಯ ಕೃತಿ ಮತ್ತು ಪ್ರಥಮ ದರ್ಜೆ ಕಾಲೇಜು ಮೂರ್ನಾಡು ಅನ್ವರ್ ತೃತೀಯ ಸ್ಥಾನ ಹಾಗೂ ಇಂಗ್ಲೀಷ್ ವಿಭಾಗ ಭಾಷಣದಲ್ಲಿ ಸಂತ ಅನ್ನಮ್ಮ ಕಾಲೇಜು ವೀರಾಜಪೇಟೆಯ ಹುದಾ ತಮ್ಮನ್ನ ಪ್ರಥಮ, ಕಾವೇರಿ ಕಾಲೇಜು ಗೋಣಿಕೊಪ್ಪದ ರಿಯಾ ದ್ವಿತೀಯ, ಯಶಿಕಾ ತೃತೀಯ ಸ್ಥಾನ ಪಡೆದುಕೊಂಡರು. ಪದವಿಪೂರ್ವ ಕನ್ನಡ ವಿಭಾಗ ಭಾಷಣದಲ್ಲಿ ರಮ್ಯ ಪ್ರಥಮ, ಪ್ರಿಯ ದ್ವಿತೀಯ, ಶೃತಿ ತೃತೀಯ ಸ್ಥಾನ ಹಾಗೂ ಇಂಗ್ಲೀಷ್ ವಿಭಾಗದ ಭಾಷಣದಲ್ಲಿ ಶ್ರೀರಕ್ಷ ಪ್ರಥಮ, ಪೂವಮ್ಮ ದ್ವಿತೀಯ, ಜಶನ್ ಬೋಪಣ್ಣ ತೃತೀಯ ಸ್ಥಾನ ಪಡೆದುಕೊಂಡರು.
ಸ್ಪರ್ಧೆಯ ತೀರ್ಪುಗಾರರಾಗಿ ಬಿದ್ದಂಡ ಲೇಖಾ ಚಂಗಪ್ಪ, ಪುನೀತಾ ಮತ್ತು ಚಮ್ಮಟಿರ ಪ್ರವೀಣ್ ಉತ್ತಪ್ಪ ಅವರುಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಿರಿಯ ಶಿಕ್ಷಕಿ ಪುಳ್ಳಂಗಡ ರೋಹಿಣಿ ಭೀಮಯ್ಯ, ಮುಕ್ಕಾಟಿರ ಕಾಳಮ್ಮ ಕಾರ್ಯಪ್ಪ ಹಾಗೂ ಬಯವಂಡ ಪಿ. ಸುಶೀಲಾ ಅವರನ್ನು ಸನ್ಮಾನಿಸಲಾಯಿತು.
ಮೂರ್ನಾಡು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳ ಗಣಿತ ಸ್ಪರ್ಧೆ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಮೂರ್ನಾಡು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳ 125 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕಾರ್ಯಕ್ರಮವನ್ನು ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ ಉದ್ಘಾಟಿಸಿದರು. ಗಣಿತ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಯನ್ನು ಮಕ್ಕಳಿಗೆ ವಿತರಿಸಲಾಯಿತು. 30 ಪ್ರಶ್ನೆಗಳಿಗೆ ಮಕ್ಕಳು ಉತ್ತರಿಸಿದರು. ಅಪರಾಹ್ನ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಂತೂರು-ಮೂರ್ನಾಡು ಗ್ರಾಮಪಂಚಾಯಿತಿ ಅಧ್ಯಕ್ಷೆ ಕಲ್ಲುಮೊಟ್ಲು ಜಮುನ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ದಿನೇಶ್ ಹೆಚ್.ಬಿ., ಶಾಲಾ ಮುಖ್ಯ ಶಿಕ್ಷಕಿ ಲಲಿತಾ, ಅಕ್ಷರ ಫೌಂಡೇಶನ್ನ ಪದಾಧಿಕಾರಿಗಳಾದ ಕಣ್ಣಿ, ರಾಜ್ಯ ಸಂಯೋಜಕ ಶಂಕರನಾರಾಯಣ ಹಾಗೂ ನೋಡಲ್ ಅಧಿಕಾರಿ ಕುಮಾರಸ್ವಾಮಿ ಉಪಸ್ಥಿತರಿದ್ದರು. ಪ್ರತಿ ತರಗತಿಯಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕ್ಲಸ್ಟರ್ ಹಂತದ ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಯೋಗೀಶ್ವರಿ ಹಾಗೂ ವಾಟೆಕಾಡು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಹರ್ಷಿಯ ಇನ್ಸ್ಪೈರ್ ಅವಾರ್ಡ್ಗೆ ಆಯ್ಕೆಯಾದ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿದರು. ಸಮಾರಂಭದಲ್ಲಿ ಸ್ಥಳೀಯ ಶಾಲಾ ಶಿಕ್ಷಕರು ಎಸ್ಡಿಎಂಸಿ ಸದಸ್ಯರು ಹಾಗೂ ಪೋಷಕರು ಪಾಲ್ಗೊಂಡಿದ್ದರು.
ಸುಂಟಿಕೊಪ್ಪ: ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪಿ.ಎಸ್. ಜಾನ್ ವಹಿಸಿ ಮಾತನಾಡಿ, ದೇಶದ ಎಲ್ಲಾ ಪೌರರಿಗೂ ಮತದಾನದ ಮಹತ್ವ ಮತ್ತು ರಾಜಕೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ದೇಶದಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳೆಲ್ಲರೂ ನಾಳಿನ ದೇಶದ ಭಾವೀ ಮತದಾರರಾಗುವವರು. ತರಗತಿಯಲ್ಲಿ ಮತದಾನ ನಮ್ಮ ಹಕ್ಕು ಎಂಬ ಪರಿಕಲ್ಪನೆಯನ್ನು ದೃಡಗೊಳಿಸಿ ಕೊಳ್ಳಬೇಕು. ಮತದಾನ ಪ್ರ್ರಕ್ರಿಯೆಗಳ ಬಗ್ಗೆ ಅರಿತುಕೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನಲ್ಲಿ ಈ ಕಾರ್ಯಕ್ರಮವನ್ನು ಆಚರಿಸುತ್ತಿದ್ದೇವೆ.
ಈ ಕಾರ್ಯಕ್ರಮದ ಸಂಪೂರ್ಣ ಲಾಭವನ್ನು ವಿದ್ಯಾರ್ಥಿಗಳು ಪಡೆದು ಕೊಳ್ಳಬೇಕು ಎಂದರು. ಇದೇ ಸಂದರ್ಭ ಉಪನ್ಯಾಸಕಿ ಕೆ.ಸಿ. ಕವಿತಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎಸ್.ಹೆಚ್. ಈಶ, ಫಿಲಿಫ್ವಾಸ್, ಉಪನ್ಯಾಸಕಿಯರಾದ ಕೆ. ಕವಿತಾ ಭಕ್ತ್, ಪದ್ಮಾವತಿ, ಜಯಶ್ರೀ, ಮಂಜುಳಾ, ಕಾವ್ಯ, ಕವಿತ, ಕನಕ, ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ: ಫೆ. 3 ರಿಂದ 9 ರವರೆಗೆ ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ 12-14 ವರ್ಷದೊಳಗಿನ ಮಕ್ಕಳ ರಾಜ್ಯ ಮಿನಿ ಒಲಂಪಿಕ್ಸ್ ಬಾಕ್ಸಿಂಗ್ ಕ್ರೀಡಾಕೂಟಕ್ಕೆ ಮರ್ಕರಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶ್ನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮರ್ಕರಾ ಬಾಕ್ಸಿಂಗ್ ಕ್ಲಬ್ನ ತರಬೇತುದಾರ ಎನ್.ಸಿ. ಸುದರ್ಶನ್ ಅವರ ಬಳಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಜಿ.ಎಸ್. ರೋಹಿತ್, ಹೆಚ್.ಬಿ. ಆದೋಕ್ಸ್, ಪಿ.ಆರ್. ಯಶಸ್, ಎನ್.ಎಸ್. ಶ್ರೀಕುಮಾರ್ ಹಾಗೂ ಎನ್.ಎಸ್. ಅಜಯ್ ಪ್ರಶಸ್ತಿಗಾಗಿ ಸೆಣಸಾಡಲಿದ್ದಾರೆ.ಸೋಮವಾರಪೇಟೆ: ಇತ್ತೀಚೆಗೆ ವೀರಾಜಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿಶೇಷಚೇತನರ ಕ್ರೀಡಾಕೂಟದಲ್ಲಿ ತಾಲೂಕಿನ ಕಿರಗಂದೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಎ.ಆರ್. ಹೇಮಂತ್ ಕುಮಾರ್, ಭರ್ಜಿ ಎಸೆತ ಹಾಗೂ ಭಾರದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಕಳೆದ ಸಾಲಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಭಾರದ ಗುಂಡು ಎಸೆತ, ಭರ್ಜಿ ಎಸೆತದಲ್ಲಿ ಪ್ರಥಮ ಸ್ಥಾನಗಳಿಸಿದ್ದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಅವರು ತರಬೇತಿ ನೀಡಿದ್ದಾರೆ. ಹೇಮಂತ್ಕುಮಾರ್, ತಾಕೇರಿ ಗ್ರಾಮದ ರವಿ ಅವರ ಪುತ್ರ.
ಸುಂಟಿಕೊಪ್ಪ: ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಮತ್ತು ಕಾಲೇಜಿನ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಾಲೇಜಿಗೆ ಉತ್ತಮ ಫಲಿತಾಂಶವನ್ನು ತರುವುದರ ಮೂಲಕ ಸಮಾಜದಲ್ಲಿ ಗೌರವ ಸಂಪಾದಿಸಲು ಸಲಹೆಯಿತ್ತರು.
ಸಮಾರಂಭದ ಉದ್ಘಾಟನೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವೈ.ಯಂ. ಕರುಂಬಯ್ಯ ನೆರವೇರಿಸಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಖಜಾಂಚಿ ಆರ್. ರಮೇಶ್ಪಿಳ್ಳೆ, ಉಪನ್ಯಾಸಕರಾದ ಪಿಲಿಫ್ ವಾಸ್, ಪದ್ಮಾವತಿ, ಈಶ, ಮಂಜುಳಾ, ಜಯಶ್ರೀ, ಸುಕನ್ಯಾ, ಕವಿತಾ, ಕಾವ್ಯ, ಸಿಬ್ಬಂದಿ ಕನಕ ಲಕ್ಷ್ಮಿ ಇತರರು ಇದ್ದರು. ವಿದ್ಯಾರ್ಥಿಗಳಾದ ದೀಕ್ಷಿತಾ ನಿರೂಪಿಸಿ, ಅಮೀರ್ ಸ್ವಾಗತಿಸಿ, ಹರ್ಷಿತ ವಂದಿಸಿದರು.
ಕೂಡಿಗೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಮತ್ತು ಯೋಗ ಸಂಸ್ಥೆ ವತಿಯಿಂದ ಶನಿವಾರಸಂತೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಾಲೇಜಿಗೆ ಉತ್ತಮ ಫಲಿತಾಂಶವನ್ನು ತರುವುದರ ಮೂಲಕ ಸಮಾಜದಲ್ಲಿ ಗೌರವ ಸಂಪಾದಿಸಲು ಸಲಹೆಯಿತ್ತರು.
ಸಮಾರಂಭದ ಉದ್ಘಾಟನೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವೈ.ಯಂ. ಕರುಂಬಯ್ಯ ನೆರವೇರಿಸಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಖಜಾಂಚಿ ಆರ್. ರಮೇಶ್ಪಿಳ್ಳೆ, ಉಪನ್ಯಾಸಕರಾದ ಪಿಲಿಫ್ ವಾಸ್, ಪದ್ಮಾವತಿ, ಈಶ, ಮಂಜುಳಾ, ಜಯಶ್ರೀ, ಸುಕನ್ಯಾ, ಕವಿತಾ, ಕಾವ್ಯ, ಸಿಬ್ಬಂದಿ ಕನಕ ಲಕ್ಷ್ಮಿ ಇತರರು ಇದ್ದರು. ವಿದ್ಯಾರ್ಥಿಗಳಾದ ದೀಕ್ಷಿತಾ ನಿರೂಪಿಸಿ, ಅಮೀರ್ ಸ್ವಾಗತಿಸಿ, ಹರ್ಷಿತ ವಂದಿಸಿದರು.
ಕೂಡಿಗೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಮತ್ತು ಯೋಗ ಸಂಸ್ಥೆ ವತಿಯಿಂದ ಶನಿವಾರಸಂತೆಯಲ್ಲಿ ನಡೆದ ಗ್ರಂಥಗಳನ್ನು ಅಭ್ಯಸಿಸಿದರೆ ಮತ್ತಷ್ಟು ಜ್ಞಾನಾರ್ಜನೆಯೊಂದಿಗೆ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ಸಾಧ್ಯ ಎಂದು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದರು.
ಭಾಗಮಂಡಲ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ದತ್ತಿನಿಧಿ ಬಹುಮಾನ ವಿತರಣಾ ಸಮಾರಂಭ ಉದ್ಘಾಟಿಸಿ ಬಳಿಕ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ನಿರ್ದೇಶಕ ನಾರಾಯಣಾಚಾರ್ ವಹಿಸಿದ್ದರು.
ವೇದಿಕೆಯಲ್ಲಿ ನಿರ್ದೆಶಕರಾದ ರವಿ ಹೆಬ್ಬಾರ್, ದಾನಿ ನಾರಾಯಣಾಚಾರ್, ಪ್ರಾಂಶುಪಾಲೆ ಜಾನಕಿ ಮೋಹನ್, ಉಪನ್ಯಾಸಕರಾದ ದಿವಾಕರ್, ಅವಿನಾಶ್ ಉಪಸ್ಥಿತರಿದ್ದರು. ಉಪನ್ಯಾಸಕ ಹೇಮಂತ್ ಸ್ವಾಗತಿಸಿ, ಸುರೇಂದ್ರ ನಿರೂಪಿಸಿ, ಲೋಕನಾಥ್ ವಂದಿಸಿದರು.