ಮಡಿಕೇರಿ, ಫೆ. 2: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2020ರ ಫೆಬ್ರವರಿ ಮಾಹೆಯಲ್ಲಿ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ.
ತಾ. 12 ರಂದು ಸಿದ್ದಾಪುರ ಮತ್ತು ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರ, ತಾ. 11 ರಂದು ಮೂರ್ನಾಡು, ತಾ. 14 ರಂದು ಹೆಬ್ಬಾಲೆ, ತಾ. 18 ರಂದು ಕೊಡ್ಲಿಪೇಟೆ, ತಾ. 19 ರಂದು ಚೆಟ್ಟಳ್ಳಿ ಮತ್ತು ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟ್ಯುಬೆಕ್ಟಮಿ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.