ಮಡಿಕೇರಿ, ಫೆ. 4: ತ್ರಿನೇತ್ರ ಯುವಕ ಸಂಘ, ತೊಂಭತ್ತುಮನೆ ಹಾಕತ್ತೂರು, ಗ್ರಾಮಾಂತರ ಪೊಲೀಸ್ ಠಾಣೆ ಮಡಿಕೇರಿ, ತಾಲೂಕು ಯುವ ಒಕ್ಕೂಟ ಮಡಿಕೇರಿ, ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ ಹಾಗೂ ಮೂರ್ನಾಡು ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮೂರ್ನಾಡು ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಸಲಾಯಿತು.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಹೆಚ್.ವಿ. ಚಂದ್ರಶೇಖರ್ ಅತಿಥಿಗಳಾಗಿ ಮಾತನಾಡಿ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ಹಾಗೂ ಇಲಾಖೆಯ ಮಾಹಿತಿಗಳನ್ನು ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಯುವಕ ಸಂಘದ ಅಧ್ಯಕ್ಷ ಸುಕುಮಾರ್ ಸಿ.ಸಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯ ದೇವಿಪ್ರಸಾದ್, ಹಾಕತ್ತೂರಿನ ಬೀಟ್ ಪೊಲೀಸ್ ಅಧಿಕಾರಿ ಸತೀಶ್, ಪೊಲೀಸ್ ಇಲಾಖೆಯ ಸಿಬ್ಬಂದಿ ದಿನೇಶ್, ಯುವಕ ಸಂಘದ ಕಾರ್ಯದರ್ಶಿ ಎಂ.ಎಂ. ಅಬೂಬಕರ್, ಎನ್.ಎಸ್.ಎಸ್. ಅಧಿಕಾರಿ ಹರೀಶ, ಕಿಗ್ಗಾಲು ಗ್ರಾಮಸ್ಥರು ಹಾಜರಿದ್ದರು. ಯುವಕ ಸಂಘದ ಅಧ್ಯಕ್ಷ ಸುಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ಅಬೂಬಕರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು, ಪೊಲೀಸ್ ಇಲಾಖೆಯ ಮಾಹಿತಿಯನ್ನು ಪಡೆದುಕೊಂಡರು.