ಮಡಿಕೇರಿ, ಫೆ.3: ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೆಚ್ಚುವರಿ ವಿದ್ಯುತ್ ಪರಿವರ್ತಕವನ್ನು ಅಳವಡಿಸುವ ಕಾಮಗಾರಿ ಕೈಗೊಳ್ಳಬೇಕಾಗಿರುವ ಹಿನ್ನೆಲೆ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ತಾ. 5 ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ವರೆಗೆ 66/11 ಕೆ.ವಿ ಪೊನ್ನಂಪೇಟೆ, 66/11 ಕೆ.ವಿ ವೀರಾಜಪೇಟೆ, 33/11 ಕೆ.ವಿ ಶ್ರೀಮಂಗಲ, 33/11ಕೆ.ವಿ ಸಿದ್ದಾಪುರ ಹಾಗೂ 33/11ಕೆ.ವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ, ವೀರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಗ ಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಅಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್, ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.