ಮಡಿಕೇರಿ, ಫೆ. 3: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನೆಲೆಸಿರುವಂತಹ ಉದ್ಯೋಗಾಕಾಂಕ್ಷಿಗಳಿಗೆ ‘ಯುವ ಕೌಶಲ್ಯ’ ಯೋಜನೆಯ ಅಡಿಯಲ್ಲಿ ಮೃದು ಕೌಶಲ್ಯ ಹಾಗೂ ಉದ್ಯೋಗವನ್ನು ಪಡೆಯಲು ಬೇಕಾದ ಅವಶ್ಯಕ ಕೌಶಲ್ಯದ ಬಗ್ಗೆ ತರಬೇತಿಯು ತಾ. 5 ರಂದು ಸೋಮವಾರಪೇಟೆ ಬಿ.ಟಿ ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾ. 7 ರಂದು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮದ ಮೂಲಕ ನೋಂದಣಿ, ಮಾರ್ಗದರ್ಶನ, ಸಮಾಲೋಚನೆ, ತರಬೇತಿ ಹಾಗೂ ಮೌಲ್ಯ ಮಾಪನ ವನ್ನು ಮಾಡಿ ಜಿಲ್ಲೆಗಳಲ್ಲಿ ನಡೆಯುವ ಉದ್ಯೋಗಮೇಳದ ಮುಖಾಂತರ ಉದ್ಯೋಗಾವಕಾಶವನ್ನು ಅಭ್ಯರ್ಥಿಗಳಿಗೆ ನೀಡಲಾಗುವುದು. ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ಕೈಪಿಡಿಯನ್ನು ನೀಡಿ ಅದರಲ್ಲಿರುವ ಅಧ್ಯಾಯಗಳ ಕುರಿತು ತರಬೇತಿ ನೀಡಲಾಗುವುದು. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತ್ತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಕಾರ್ಯಕ್ರಮ ದಲ್ಲಿ ಭಾಗವಹಿಸಬಹುದಾಗಿದೆ. ಕನಿಷ್ಟÀ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಿತಿತಿ.ಞಚಿushಚಿಟಞಚಿಡಿ.ಛಿom ವೆಬ್ಸೈಟ್ನಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸುವುದು ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಮಡಿಕೇರಿ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.