ಮಡಿಕೇರಿ, ಫೆ. 4: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ 30ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ನೀಡುವ ಪ್ರತಿಷ್ಠಿತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿಯನ್ನು ಕುಂಟಾರು ರವೀಶ್ ತಂತ್ರಿ ಅವರು ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ.ಎಂ. ಶಾಹಿದ್ ಅವರಿಗೆ ಪ್ರದಾನ ಮಾಡಿದರು.

ಕರ್ನಾಟಕ ರಾಜ್ಯದ ಗಡಿನಾಡಿನಲ್ಲಿ ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದನ್ನು ಗುರುತಿಸಿ ಕಾಸರಗೋಡಿನಲ್ಲಿ ನಡೆದ 7ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನದಲ್ಲಿ ನೀಡಲಾಯಿತು. ಈ ಸಂದರ್ಭ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಟಿ.ಎಂ. ಶಾಝ್ ತೆಕ್ಕಿಲ್ ಹಾಗೂ ಟಿ.ಎಂ. ಶೈನ್ ತೆಕ್ಕಿಲ್ ಉಪಸ್ಥಿತರಿದ್ದರು.