ಭಾಗಮಂಡಲ, ಫೆ. 9: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಂಪಾಜೆಯ ಕಲ್ಲಾಳ ಗ್ರಾಮದಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ಅರಿವು ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಚೆದ್ಕಾರ್ ವಹಿಸಿದ್ದರು. ತಾಲೂಕು ಪಂಚಾಯಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕವಿತಾ ಸೌಲಭ್ಯಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯೆ ಯಮುನಾ, ಪಿಡಿಒ ಶೋಭಾರಾಣಿ, ಪೆರಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ಧರಣೀಧರ, ಗ್ರಾಮಸ್ಥರು, ಸಹಕಾರಿ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ಶ್ರೀಧರ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.