ಸಿದ್ದಾಪುರ, ಫೆ. 9: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ನದಿತೀರದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಸಿದ್ದಾಪುರ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ತಾ. 10 ರಿಂದ (ಇಂದಿನಿಂದ) ಅಹೋರಾತ್ರಿ ಪ್ರತಿಭಟನೆ ನಡೆಯಲಿದೆ ಎಂದು ಸಂತ್ರಸ್ತರ ಹೋರಾಟ ಸಮಿತಿಯ ಪ್ರಮುಖರಾದ ಯಮುನ ತಿಳಿಸಿದ್ದಾರೆ.