ಮಡಿಕೇರಿ, ಫೆ. 9: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ವೈರಸ್ ಬಗ್ಗೆ ಅರಿವು ಮೂಡಿಸುವ ಬ್ಯಾನರ್‍ನ್ನು ಜಿಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಬಿಡುಗಡೆಗೊಳಿಸಿದರು.
ಬ್ಯಾನರ್‍ನಲ್ಲಿ ಕೊರೊನಾ ವೈರಸ್ ಬಗ್ಗೆ ಹೇಗೆ ಎಚ್ಚರಿಕೆ ವಹಿಸಬೇಕು ಮತ್ತು ಸೋಂಕಿತರಿಂದ ಅಂತರ ಕಾಯ್ದುಕೊಳ್ಳುವ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬ್ಯಾನರ್‍ಗಳನ್ನು ಬಿಡುಗಡೆ ಮಾಡಲಾಗಿದೆ.
ಇದರಲ್ಲಿ ಕೊರೊನಾ ವೈರಸ್ ಬಗ್ಗೆ ಭಯ ಬೇಡ, ಎಚ್ಚರಿಕೆ ವಹಿಸಿ ಎಂಬ ಸಂದೇಶವನ್ನು ಒಳಗೊಂಡಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರಲ್ಲಿ ಅರಿವು ಮೂಡಿಸಲು ಇದು ಅತ್ಯಂತ ಸಹಕಾರಿಯಾಗಿದೆ.
ಬ್ಯಾನರ್ ಬಿಡುಗಡೆ ಸಂದರ್ಭ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್, ಆರ್.ಸಿ.ಹೆಚ್. ಅಧಿಕಾರಿ ಡಾ. ಗೋಪಿನಾಥ್ ಹಾಜರಿದ್ದರು.