ಕುಶಾಲನಗರ, ಫೆ. 9: ಕುಶಾಲನಗರದ ರೋಟರಿ ಸಂಸ್ಥೆ ಹಾಗೂ ರೆಡ್‍ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ರಕ್ತದಾನ ಶಿಬಿರ ಮತ್ತು ಏಡ್ಸ್ ಕುರಿತ ಜಾಗೃತಿ ಜಾಥಾ ನಡೆಯಿತು.
ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ ಸಹಯೋಗ ದೊಂದಿಗೆ ಕಾಲೇಜು ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರವನ್ನು ರೋಟರಿ 3181 ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯು ಉದ್ಘಾಟಿಸಿದರು. ರೆಡ್‍ಕ್ರಾಸ್ ಸಂಸ್ಥೆ ಅಧ್ಯಕ್ಷ ಎಸ್.ಕೆ. ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ರಕ್ತನಿಧಿ ಘಟಕದ ವೈದ್ಯರಾದ ಡಾ. ಕರುಂಬಯ್ಯ ರಕ್ತದಾನದ ಮಹತ್ವ ಮತ್ತು ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.
ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಕೆಂಪೇಗೌಡ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ವಲಯ ಕಾರ್ಯದರ್ಶಿ ಎಚ್.ಟಿ. ಅನಿಲ್, ವಲಯ ಪ್ರತಿನಿಧಿ ಎನ್.ಜಿ. ಪ್ರಕಾಶ್, ಕುಶಾಲನಗರ ರೋಟರಿ ಅಧ್ಯಕ್ಷ ಎಂ.ಡಿ. ಅಶೋಕ್, ಕಾರ್ಯದರ್ಶಿ ಸಂಜು ಬೆಳ್ಳಿಯಪ್ಪ, ಕಾಲೇಜು ರೆಡ್‍ಕ್ರಾಸ್ ಘಟಕದ ಸಂಚಾಲಕ ಗಿರೀಶ್, ರೋಟರಿ ಮತ್ತು ರೆಡ್‍ಕ್ರಾಸ್ ಸಂಸ್ಥೆ ಪ್ರಮುಖರಾದ ಕೆ.ಪಿ. ಚಂದ್ರಶೇಖರ್, ಪಂಡರಿನಾಥ ನಾಯ್ಡು, ಮಹೇಶ್ ನಾಲ್ವಡೆ, ಕ್ರಿಜ್ವಲ್ ಕೋಟ್ಸ್, ಶೋಭಾ ಸತೀಶ್, ಎನ್.ಕೆ. ಮೋಹನ್‍ಕುಮಾರ್, ಬಿ.ಜೆ. ಅಣ್ಣಯ್ಯ ಸೇರಿದಂತೆ ನಿರ್ದೇಶಕರು, ಸದಸ್ಯರು, ಕಾಲೇಜು ಉಪನ್ಯಾಸಕ ವೃಂದದವರು ಇದ್ದರು. ಇದೇ ಸಂದರ್ಭ ರೆಡ್‍ಕ್ರಾಸ್ ಸಂಸ್ಥೆ ಪ್ರಮುಖರು, ವಿದ್ಯಾರ್ಥಿಗಳು ರಕ್ತದಾನ ಮಾಡಿದರು.