ಸಿದ್ದಾಪುರ, ಫೆ. 9: ವಾಲ್ನೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ವಿವಿಧ ರಸ್ತೆ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು. ಅಲ್ಲದೇ ನೆಲ್ಲಿಹುದಿಕೇರಿ ಎಂ.ಜಿ. ಕಾಲೋನಿಯ ನೀರಿನ ಟ್ಯಾಂಕಿನ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು ಈಗಾಗಲೇ ಕ್ಷೇತ್ರದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಗ್ರಾಮಗಳಲ್ಲಿ ಇರುವ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. ಕ್ಷೇತ್ರದ ಹಲವಾರು ರಸ್ತೆಗಳ ಹಾಗೂ ತಡೆಗೋಡೆಗಳ ಕಾಮಗಾರಿಯು ಮುಕ್ತಾಯಗೊಂಡಿರುತ್ತದೆ. ಮತ್ತಷ್ಟು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫಿಯಾ, ಪಿ.ಡಿ.ಓ. ಅನಿಲ್ ಕುಮಾರ್ ಹಾಗೂ ಗ್ರಾ.ಪಂ. ಸದಸ್ಯರುಗಳು ಹಾಜರಿದ್ದರು.