ಸುಂಟಿಕೊಪ್ಪ, ಫೆ. 9: ಮಕ್ಕಳಿಗೆ ಮಾನವೀಯ ಶಿಕ್ಷಣವನ್ನು ಕೊಡಬೇಕಾಗಿದೆ. ಆ ನಿಟ್ಟಿನಲ್ಲಿ ಪೋಷಕರ ಶ್ರಮ ಅತ್ಯಂತ ಪರಿಣಾಮಕಾರಿಯಾದದ್ದು ಎಂದು ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಎಸ್. ಜಾನ್ ತಿಳಿಸಿದರು.
ಮಂಜುನಾಥಯ್ಯ ಸಹಕಾರ ಭವನದಲ್ಲಿ ನಡೆದ ಜ್ಞಾನಧಾರಾ ನರ್ಸರಿ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗರಹಳ್ಳಿ ಕಾಫಿ ಬೆಳೆಗಾರರಾದ ನಂಬುಡುಮಾಡ ಗೊಂಬೆ ಚಂಗಪ್ಪ ಮಾತನಾಡಿ, ಮಕ್ಕಳಿಗೆ ಹೆಚ್ಚಿನ ಪ್ರೀತಿ ನೀಡಿದರೆ ಮಾತ್ರ ಅವರು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಸಮಾಜದ ಅಧ್ಯಕ್ಷೆ ಲೀಲಾ ಮೇದಪ್ಪ, ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ಶಾಲೆಯ ಮುಖ್ಯ ಶಿಕ್ಷಕಿ ಶಾಂತಿ ದೇವರಾಜು, ಆಡಳಿತ ಮಂಡಳಿಯ ಸದಸ್ಯರು ಇದ್ದರು. ಸಾವಿತ್ರಿ ಕಾವೇರಪ್ಪ ಸ್ವಾಗತಿಸಿ, ಸರೋಜಿನಿ ಸೋಮಣ್ಣ ವರದಿ ವಾಚಿಸಿ, ಸಬಿತ ನಾಣಯ್ಯ ವಂದಿಸಿದರು.