ವೀರಾಜಪೇಟೆ, ಫೆ. 9: ಕ್ಲೀನ್ ಕೂರ್ಗ್ ಸೇವಾ ಸಂಸ್ಥೆಯಿಂದ ಇಲ್ಲಿನ ಸಂತ ಅನ್ನಮ್ಮ ಪ್ರೌಢಶಾಲೆ ಆವರಣದಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂತ ಅನ್ನಮ್ಮ ಶಾಲೆಯ ಇಕೋ ಕ್ಲಬ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್ ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಈ ನಿಟ್ಟಿನಲ್ಲಿ ಸಾರ್ವಜನಿಕರಿಗೂ ಅರಿವು ಮೂಡಿಸಲು ಸೈಕಲ್ ಜಾಥಾ ಏರ್ಪಡಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಮಾತನಾಡಿದ ಕ್ಲೀನ್ ಕೂರ್ಗ್ ಸೇವಾ ಸಂಸ್ಥೆಯ ಪ್ರಮುಖರಾದ ಅರುಣ್ ಅಪ್ಪಚ್ಚು ಅವರು ಕೊಡಗನ್ನು ಸ್ವಚ್ಛವಾಗಿಡುವುದೇ ಸೇವಾ ಸಂಸ್ಥೆಯ ಉದ್ದೇಶವಾಗಿದೆ ಎಂದರು.

ಈಗಾಗಲೇ ಸೇವಾ ಸಂಸ್ಥೆ ವತಿಯಿಂದ ಜಿಲ್ಲೆಯ ವಿವಿಧೆಡೆಗಳ ಸುಮಾರು 30 ಶಾಲೆಗಳಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಅರಿವು ಕಾರ್ಯಕ್ರಮವನ್ನು ನಡೆಸಿದ್ದು; ಈ ಕಾರ್ಯಕ್ರಮ ನಿರಂತರವಾಗಿ ಮುಂದುವರೆಯಲಿದೆ ಎಂದರು.

ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಧಾನ ಆಡಳಿತಗಾರರಾದÀ ರೆ.ಫಾ. ಮದಲೈ ಮುತ್ತು, ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಬೆನ್ನಿ ಸಾಲ್ಡಾನ, ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.