ಮಡಿಕೇರಿ, ಏ. 17: ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇರುವವರನ್ನು ಪತ್ತೆ ಹಚ್ಚಿದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿರುತ್ತಾರೆ. ಇತರ ಜಿಲ್ಲೆ, ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರೂ ಸೇರಿದಂತೆ 14 ದಿನಗಳೊಳಗಿರುವ ಗೃಹ ಸಂಪರ್ಕ ತಡೆಯಲ್ಲಿರುವ ಪ್ರಕರಣಗಳ ವಿವರಗಳು ಕೆಳಕಂಡಂತಿವೆ:
ದೆಹಲಿಯ ಧಾರ್ಮಿಕ ಸಮ್ಮೇಳನ ಸಂಬಂಧ ಜಿಲ್ಲೆಯಿಂದ ದೆಹಲಿಗೆ ತೆರಳಿ ಹಿಂತಿರುಗಿರುವ ಜನರು-14, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರ ಜಿಲ್ಲೆಗಳ ಜನರು-278, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಇತರ ರಾಜ್ಯದ ಜನರು-18, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು-310. ಇಲ್ಲಿಯವರೆಗೆ ಒಟ್ಟು 154 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಹಾಲಿ ದೃಢಪಟ್ಟಿದ್ದ 1 ಪ್ರಕರಣ ಗುಣಮುಖರಾಗಿರುವುದರಿಂದ ಒಟ್ಟು 116 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. 38 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ 38 ಜನರು ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.