ಕುಶಾಲನಗರ, ಏ. 19: ಕುಶಾಲನಗರ- ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಗಡಿಭಾಗದ ಮೈಸೂರು ಜಿಲ್ಲಾ ಹೆದ್ದಾರಿಯಲ್ಲಿ ಭಾರಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಗಡಿಭಾಗದಲ್ಲಿ ಪೆÇಲೀಸ್ ತಪಾಸಣಾ ಕೇಂದ್ರದಲ್ಲಿ ಪೆÇಲೀಸ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಅಧಿಕಾರಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಮೈಸೂರು ಜಿಲ್ಲೆಗೆ ಕೊಡಗು ಭಾಗದಿಂದ ಒಳಬರುವ ಮತ್ತು ಜಿಲ್ಲೆಯಿಂದ ಹೊರ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸುತಿದ್ದಾರೆ. ಅಗತ್ಯ ವಸ್ತುಗಳ ಸಾಗಣೆ ಮಾಡುವ ಮತ್ತು ತುರ್ತು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಕಲ್ಪಿಸಲಾಗುತ್ತಿದೆ. ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಇದರೊಂದಿಗೆ ಮೈಸೂರು ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಬೈಲುಕುಪ್ಪೆಯ ಟಿಬೆಟಿಯನ್ನರ ಶಿಬಿರ ಮತ್ತು ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆಗೆ ಕಾರ್ಯ ನಿರ್ವಹಿಸುತ್ತಿದ್ದಾರೆ.