ಮಡಿಕೇರಿ, ಏ. 19: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕೋವಿಡ್-19ಗೆ ಸಂಬಂಧಿಸಿದಂತೆ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಡಾ. ನರಸಿಂಹ ಅವರು ಕೊರೊನಾ ವೈರಾಣು ಹರಡುವಿಕೆ, ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಯುವಜನತೆಯ ಪಾತ್ರ, ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಸಂಯೋಜಕಿ ಡಾ. ನಾಗರತ್ನ ಮಾತನಾಡಿ, ಈ ವಿಶಿಷ್ಟ ಕಾರ್ಯಕ್ರಮದ ಆಯೋಜನೆ, ಉದ್ದೇಶ ವಿಶ್ವವಿದ್ಯಾನಿಲಯದ ಪ್ರಯತ್ನಗಳ ಬಗ್ಗೆ ಮಾಹಿತಿ ನೀಡಿದರು. ಕೊಡಗಿನ ನೋಡಲ್ ಅಧಿಕಾರಿ ವನಿತ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಡಾ. ಸಿ. ಜಗತ್ ತಿಮ್ಮಯ್ಯ ವಿದ್ಯಾರ್ಥಿಗಳನ್ನು ಮನೆಯಲ್ಲೇ ಉಳಿದು, ಆರೋಗ್ಯ ಕಾಪಾಡಿಕೊಳ್ಳಲು ಕರೆ ನೀಡಿದರು.

ಕಾಲೇಜಿನ ಯೋಜನಾಧಿಕಾರಿ ಡಾ. ಗೀತಾಂಜಲಿ ಕಾರ್ಯಕ್ರಮ ನಿರೂಪಿಸಿ, ಅಲೋಕ್ ಬಿಜೈ ವಂದಿಸಿದರು.