ಕುಶಾಲನಗರ, ಏ. 19: ಮಡಿಕೇರಿಯ ರಾಜೇಶ್ವರಿ ಆಸ್ಪತ್ರೆಯ ವೈದ್ಯರ ತಂಡದಿಂದ ಕುಶಾಲನಗರ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಕುಶಾಲನಗರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಶಿಬಿರದಲ್ಲಿ ಡಾ. ಬಿ.ಸಿ. ನವೀನ್ ಕುಮಾರ್ ನೇತೃತ್ವದಲ್ಲಿ ಸುಮಾರು 40ಕ್ಕೂ ಅಧಿಕ ಪೌರಕಾರ್ಮಿಕರ ತಪಾಸಣೆ ನಡೆಸಲಾಯಿತು. ಈ ಸಂದರ್ಭ ರಕ್ತದೊತ್ತಡ, ಸಕ್ಕರೆ ಕಾಯಿಲೆ ಮತ್ತು ಹೃದಯ ಸಂಬಂಧಿತ ಕಾಯಿಲೆಗಳ ಬಗ್ಗೆ ಕೂಡ ತಪಾಸಣೆ ನಡೆಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ವೈದ್ಯರಾದ ಡಾ. ತೇಜಸ್ವಿ, ಡಾ. ಪುರುಷೋತ್ತಮ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುಜಯಕುಮಾರ್, ಆರೋಗ್ಯಾಧಿಕಾರಿ ಉದಯ ಕುಮಾರ್, ಬಿಜೆಪಿ ಪ್ರಮುಖ ಬಿ.ಬಿ. ಭಾರತೀಶ್, ನಗರ ಅಧ್ಯಕ್ಷ ಕೆ.ಜಿ. ಮನು, ಎಂ.ಡಿ. ಕೃಷ್ಣಪ್ಪ, ಶಿವಾಜಿರಾವ್ ಮತ್ತಿತರರು ಇದ್ದರು.