ಕುಶಾಲನಗರ, ಏ. 19: ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸುವ ಮೂಲಕ ಕೊರೊನಾ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಕುಶಾಲನಗರ ಜೆಎಂಎಫ್‍ಸಿ ನ್ಯಾಯಾಧೀಶರಾದ ಸಂದೀಪ್ ರೆಡ್ಡಿ ಕರೆ ನೀಡಿದ್ದಾರೆ.
ಅವರು ಕುಶಾಲನಗರದಲ್ಲಿ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಕೊಡಗು ಜಿಲ್ಲಾ ರೆಡ್‍ಕ್ರಾಸ್ ಆಶ್ರಯದಲ್ಲಿ ಕುಶಾಲನಗರ ಆಟೋ ಚಾಲಕರಿಗೆ ಮಾಸ್ಕ್ ಮತ್ತು ಸೋಪ್ ವಿತರಣೆ ಮಾಡಿ ಮಾತನಾಡಿದರು.
ಕುಶಾಲನಗರ ಸರಕಾರಿ ಬಸ್ ನಿಲ್ದಾಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ರವೀಂದ್ರ ರೈ, ತಾಲೂಕು ಘಟಕದ ಅಧ್ಯಕ್ಷ ಎಸ್.ಕೆ.ಸತೀಶ್, ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರಬಾಬು, ಆಟೋ ಚಾಲಕರ ಸಂಘದ ಅಧ್ಯಕ್ಷ ವಿ.ಪಿ.ನಾಗೇಶ್ ಮತ್ತು ಸ್ವಯಂಸೇವಕರು ಇದ್ದರು.