ಕೂಡಿಗೆ, ಸೆ. 29: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಗಿರೀಶ್ ಕುಮಾರ್ ಆಯ್ಕೆಗೊಂಡಿದ್ದಾರೆ. ಆಯ್ಕೆ ಪ್ರಕ್ರಿಯೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಅಧ್ಯಕ್ಷತೆಯಲ್ಲಿ ಮಲ್ಲೇನಹಳ್ಳಿ ಗಣಪತಿ ಸಭಾಂಗಣದಲ್ಲಿ ನಡೆಯಿತು.
ಕೇಂದ್ರದ ಉಪಾಧ್ಯಕ್ಷರಾಗಿ ಓಡಿಯಂಡ ಬೋಪಯ್ಯ, ಹಿಂದುಳಿದ ವರ್ಗಕ್ಕೆ ಕೃಷ್ಣ, ಮಹಿಳಾ ವಿಭಾಗಕ್ಕೆ ಜಯಶ್ರೀ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತಾನಾಡಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಪಕ್ಷದ ಬಲವರ್ಧನೆ ಗ್ರಾಮ ಮಟ್ಟದ ಸಂಘಟನೆ ಮುಖ್ಯವಾಗಿರುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದರಾಗಿರುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ಲೋಕೇಶ್ ಕುಮಾರ್, ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಮನುಕುಮಾರ ರೈ, ಗಣಿ ಪ್ರಸಾದ್, ಕೆ.ಕೆ ಭೋಗಪ್ಪ, ಕೆ. ವರದ, ಆರ್. ಕೃಷ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳ, ತಾಲೂಕು ಪಂಚಾಯಿತಿ ಸದಸ್ಯೆ ಸಬಿತಾ ಚನ್ನಕೇಶವ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.