ಸುಂಟಿಕೊಪ್ಪ, ಸೆ. 29: ಸುಂಟಿಕೊಪ್ಪ ಪೆÇಲೀಸ್ ಠಾಣಾ ವ್ಯಾಪ್ತಿಯ ಹೇರೂರು ಗ್ರಾಮದ ಸುಬ್ರಮಣಿ ಎಂಬುವವರು ತಮ್ಮ ಕಾಫಿ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆಸಿದ್ದು, ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಒಟ್ಟು 2 ಕೆಜಿ 820 ಗ್ರಾಂ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಸುಂಟಿಕೊಪ್ಪ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಕೊಡಗು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಮಿಶ್ರಾ ಸೋಮವಾರಪೇಟೆ ಉಪ ವಿಭಾಗದ ಉಪ ಅಧೀಕ್ಷಕ ಹೆಚ್.ಎಂ. ಶೈಲೇಂದ್ರ ಅವರ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಎಂ. ಮಹೇಶ್ ಅವರ ನೇತೃತ್ವದಲ್ಲಿ ಸುಂಟಿಕೊಪ್ಪ ಪೆÇಲೀಸ್ ಠಾಣಾ ಉಪನಿರೀಕ್ಷಕ ವೆಂಕಟರಮಣ, ಸಿಬ್ಬಂದಿಗಳಾದ ಗಣಪತಿ, ಸಜಿ, ದಯಾನಂದ, ಪ್ರಕಾಶ, ಸಂದೇಶ, ಖಾದರ್, ಪುನೀತ್ ಚಾಲಕರುಗಳಾದ ಅರುಣ, ಜೈಶಂಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.