ಮಡಿಕೇರಿ, ಸೆ. 29: ಶ್ರೀ ಭಗತ್ ಸಿಂಗ್ ಯುವಕ ಸಂಘ ಮಾದಾಪುರ ಇವರ ವತಿಯಿಂದ ಕ್ರಾಂತಿಕಾರಿ ಹುತಾತ್ಮ ಭಗತ್ ಸಿಂಗ್ ಅವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮ ಕುರಿತು ಮಾತನಾಡಿದ ಸಂಘದ ಗೌರವ ಸಲಹೆಗಾರ ಬಸವರಾಜು, ಕ್ರಾಂತಿಕಾರಿ ಭಗತ್ ಸಿಂಗ್ ಇವರ ತತ್ವ ಸಿದ್ಧಾಂತ ಆದರ್ಶಗಳು ಇಂದಿನ ಯುವಕರಿಗೆ ಮಾದರಿಯಾಗಬೇಕು. ಎಲ್ಲರು ದೇಶದ ಒಳಿತಿಗಾಗಿ ಶ್ರಮಿಸಿ ಎಂದು ಸಲಹೆ ನೀಡಿದರು. ಸಂಘದ ಸದಸ್ಯ ಉಮರ್ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಬಾಲಕೃಷ್ಣ, ಉಪಾಧ್ಯಕ್ಷ ಹರೀಶ್, ಕಾರ್ಯದರ್ಶಿ ಚೇತನ್, ಖಜಾಂಜಿ ಪ್ರದೀಶ್, ದೇವಸ್ಥಾನ ಕಮಿಟಿಯ ಸದಸ್ಯರಾದ ಲವಕುಮಾರ್, ಕೊರಗಪ್ಪ, ಸಾಮಾಜಿಕ ಕಾರ್ಯಕರ್ತ ಹರೀಶ್ ಮತ್ತು ಸಂಘದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.