ಪಾಲಿಬೆಟ್ಟ, ಸೆ. 29: ಸರಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಬೋಧಿಸುತ್ತಿದ್ದು, ಕಂಪ್ಯೂಟರ್ ಜ್ಞಾನದೊಂದಿಗೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ದಾನಿಗಳ ಸಹಕಾರದಿಂದ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಂಪ್ಯೂಟರ್ ಪ್ರಯೋಗಾಲಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗದೆ ತಮ್ಮ ಪ್ರತಿಭೆಯ ಮೂಲಕ ಸಾಧನೆಯೊಂದಿಗೆ ಪ್ರತಿಭಾನ್ವಿತರಾಗಿ ಗುರುತಿಸಿಕೊಳ್ಳು ವಂತಾಗಬೇಕು ಎಂದು ಹೇಳಿದರು. ಕಾಲೇಜಿಗೆ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ದಾನಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಜಾನ್ ಥಾಮಸ್ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಕಂಪ್ಯೂಟರ್ ಅತ್ಯವಶ್ಯಕವಾಗಿದ್ದು, ಶಿಕ್ಷಕರುಗಳ ಪರಿಶ್ರಮದಿಂದ ಕಂಪ್ಯೂಟರ್ ಪ್ರಯೋಗಾಲಯ ಪ್ರಾರಂಭವಾಗಿದೆ. ಸರ್ಕಾರಿ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ದಾನಿಗಳು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡಬೇಕೆಂದರು.

ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ದಾನಿಗಳಾದ ಡಾ. ಸುಧಾಕರ್ ಎಸ್ ಶೆಟ್ಟಿ, ಟಿ.ಟಿ ಜಾನ್ ಥಾಮಸ್, ಮುನೀರ್, ವಿಷ್ಣು, ಹರ್ಷವರ್ಧನ್, ಬಿ.ಬಿ ನಾಗರಾಜ್, ಸುಧಾಕರ ರೈ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜು ಪ್ರಾಚಾರ್ಯರಾದ ಕೆ.ಕೆ ಶ್ಯೆನಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪುಲಿಯಂಡ ಬೋಪಣ್ಣ, ಜಿ.ಪಂ. ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ತಾ.ಪಂ. ಸದಸ್ಯ ಕುಟ್ಟಂಡ ಅಜಿತ್ ಕರುಂಬಯ್ಯ, ನಿವೃತ್ತ ಪ್ರಾಚಾರ್ಯರಾದ ಡಾ.ಕೆ.ಎಂ ಭವಾನಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಕುಟ್ಟಂಡ ವಸಂತ್, ದೀಪಕ್ ಗಣಪತಿ, ಎಚ್.ಆರ್ ಸರಸಿಂಹ, ಉಪನ್ಯಾಸಕ ರಾದ ಕೆ.ಕೆ ಸುನೀತಾ, ಪಾರ್ವತಿ, ಶಿವದಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.