ಗೋಣಿಕೊಪ್ಪ ವರದಿ, ಸೆ. 30: ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿಯ ಕೃಷಿ ಮೋರ್ಚಾ, ಮಹಿಳಾ ಮೋರ್ಚಾ, ಯುವಮೋರ್ಚಾ ಸಮಿತಿಗಳಿಗೆ ಆಯ್ಕೆ ಪ್ರಕ್ರಿಯೆ ಮತ್ತು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಅಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.
30 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಶಾಲು ಹೊದಿಸಿ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ಕುಮಾರ್ ಪಕ್ಷಕ್ಕೆ ಬರಮಾಡಿಕೊಂಡರು.
ಕುಟ್ಟ ಶಕ್ತಿ ಕೇಂದ್ರ ಪ್ರಮುಖ್ ತೀತಿರ ಮಂಜುನಾಥ್, ದಿನೇಶ್, ತಾಲೂಕು ಕೃಷಿ ಮೋರ್ಚಾ ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷ ಮಲಚೀರ ಕವಿತ ಬೋಜಪ್ಪ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಸೋಮೆಯಂಡ ಕವನ್ ಕಾರ್ಯಪ್ಪ, ಟಿ. ಶೆಟ್ಟಿಗೇರಿ, ಶ್ರೀಮಂಗಲ, ಕುಟ್ಟ ಮಹಾಶಕ್ತಿ ಕೆಂದ್ರದ ಪ್ರಮುಖ್ ಮಚ್ಚಮಾಡ ಮುರುಳಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಚೋಡುಮಾಡ ಶರೀನ್ ಸುಬ್ಬಯ್ಯ ಇದ್ದರು.