ಬೆಂಗಳೂರು, ಅ. 12: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾಗಿದ್ದ ಬಿ. ಶ್ರೀರಾಮುಲು ಅವರ ಖಾತೆ ಬದಲಾವಣೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಢೀರನೇ ಖಾತೆ ಬದಲಾವಣೆ ಮಾಡಿದ್ದು, ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಡಾ. ಕೆ. ಸುಧಾಕರ್ ಅವರಿಗೆ ಆರೋಗ್ಯ ಇಲಾಖೆ ಖಾತೆಯನ್ನು ವಹಿಸಿದ್ದಾರೆ. ಇತ್ತ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಖಾತೆ ನೀಡಲಾಗಿದೆ. ಖಾತೆ ವರ್ಗಾವಣೆ ಮಾಡಿರುವ ಬಗ್ಗೆ ಸಚಿವ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆ.